ಸ್ಥಳೀಯ ಸಂಸ್ಥೆಗಳ ಮೀಸಲು ಪ್ರಕಟ

KannadaprabhaNewsNetwork | Published : Aug 6, 2024 12:36 AM

ಸಾರಾಂಶ

ಹೊಸ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರವು ಆ. ೫ರಂದು ಮೀಸಲಾತಿಯನ್ನು ಘೋಷಿಸಿದೆ.

ಕಾರವಾರ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಪಡಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ವಿವರ ಹೀಗಿದೆ.

ನಗರಸಭೆ: ದಾಂಡೇಲಿ- ಸಾಮಾನ್ಯ, ಹಿಂದುಳಿದ ವರ್ಗ ಬಿ ಮಹಿಳೆ, ಕಾರವಾರ- ಸಾಮಾನ್ಯ, ಸಾಮಾನ್ಯ ಮಹಿಳೆ, ಶಿರಸಿ ಸಾಮಾನ್ಯ ಮಹಿಳೆ, ಸಾಮಾನ್ಯ.

ಪುರಸಭೆ: ಅಂಕೋಲಾ- ಸಾಮಾನ್ಯ, ಸಾಮಾನ್ಯ ಮಹಿಳೆ, ಭಟ್ಕಳ- ಎಸ್‌ಸಿ ಮಹಿಳೆ, ಹಿಂದುಳಿದ ವರ್ಗ ಎ. ಹಳಿಯಾಳ- ಸಾಮಾನ್ಯ ಮಹಿಳೆ, ಎಸ್ ಸಿ ಮಹಿಳೆ. ಕುಮಟಾ - ಸಾಮಾನ್ಯ, ಸಾಮಾನ್ಯ ಮಹಿಳೆ.

ಪಟ್ಟಣ ಪಂಚಾಯಿತಿ: ಹೊನ್ನಾವರ- ಸಾಮಾನ್ಯ, ಸಾಮಾನ್ಯ, ಜಾಲಿ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ ಎ. ಮಂಕಿ- ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ ಮಹಿಳೆ. ಸಿದ್ದಾಪುರ- ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ. ಮುಂಡಗೋಡ - ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ ಎ ಮಹಿಳೆ. ಯಲ್ಲಾಪುರ- ಹಿಂದುಳಿದ ವರ್ಗ ಬಿ ಮಹಿಳೆ, ಸಾಮಾನ್ಯ.ಶಿರಸಿ ನಗರಸಭೆ: ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು

ಶಿರಸಿ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಆ. ೫ರಂದು ಮೀಸಲಾತಿ ಪ್ರಕಟಿಸಿದ್ದು, ಶಿರಸಿ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.ಕಳೆದ ಮೂರು ವರ್ಷಗಳಿಂದ ರಾಜ್ಯ ಸ್ಥಳೀಯ ಸಂಸ್ಥೆಗಳಲ್ಲಿ ತೆರವಾಗಿದ್ದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ರಾಜ್ಯ ಸರ್ಕಾರ ಹಲವು ಬಾರಿ ಮೀಸಲಾತಿ ಪಟ್ಟಿ ಪ್ರಕಟಿಸಿತ್ತು. ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಕೆಲ ಸ್ಥಳೀಯ ಸಂಸ್ಥೆಗಳ ಸದಸ್ಯರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕರಟಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಹೊಸ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರವು ಆ. ೫ರಂದು ಮೀಸಲಾತಿಯನ್ನು ಘೋಷಿಸಿದೆ.ಶಿರಸಿ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಈ ಕಾರಣದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯು ಬಹಳ ಕುತೂಹಲ ಮೂಡಿದೆ ಎಂದು ತಿಳಿದು ಬಂದಿದೆ.ಶಿರಸಿ ನಗರಸಭೆಯು ೩೧ ಸದಸ್ಯರನ್ನು ಹೊಂದಿದ್ದು, ೧೭ ಬಿಜೆಪಿ ಸದಸ್ಯರು, ೯ ಕಾಂಗ್ರೆಸ್ ಸದಸ್ಯರು, ೧ ಜೆಡಿಎಸ್ ಸದಸ್ಯರು ಹಾಗೂ ೪ ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ. ಇಬ್ಬರು ಪಕ್ಷೇತರ ಸದಸ್ಯರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಬಿಜೆಪಿ ಸದಸ್ಯರ ಸಂಖ್ಯಾ ಬಲ ೧೯ಕ್ಕೆ ಏರಿಕೆಯಾಗಿದೆ. ಈ ಕಾರಣದಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಬಹಳ ಪೈಪೋಟಿ ಏರ್ಪಟ್ಟಿದೆ.

Share this article