ಪಿಯುಸಿ ಪರೀಕ್ಷೆ: ಎಸ್‌ಟಿಜಿ ಪದವಿ ಪೂರ್ವ ಕಾಲೇಜಿಗೆ ಶೇ.99.8 ರಷ್ಟು ಫಲಿತಾಂಶ

KannadaprabhaNewsNetwork | Published : Apr 10, 2025 1:02 AM

ಸಾರಾಂಶ

ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99.8 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪರೀಕ್ಷೆ ಬರೆದ ಕಾಲೇಜಿನ ಒಟ್ಟು 474 ವಿದ್ಯಾರ್ಥಿಗಳಲ್ಲಿ 473 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99.8 ರಷ್ಟು ಫಲಿತಾಂಶ ಪಡೆದುಕೊಂಡಿದೆ.

ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಪರೀಕ್ಷೆ ಬರೆದ ಕಾಲೇಜಿನ ಒಟ್ಟು 474 ವಿದ್ಯಾರ್ಥಿಗಳಲ್ಲಿ 473 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 241 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ವಿ.ಲೇಖನ-587(ಶೇ.97.83), ಎಸ್.ರುತ್ವಿಕ್-587(ಶೇ.97.83), ಟಿ.ಸಿ.ಶಶಾಂಕ್ - 587(ಶೇ.97.83), ಬಿ.ಆರ್.ಶೀಥಲ - 586 (ಶೇ.97.67) ಅಂಕಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿ ಸಾಧನೆ ಮಾಡಿದ್ದಾರೆ.

ಪಿಸಿಎಂಬಿ ವಿಭಾಗದಿಂದ 405 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 405 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ಬಂದಿದೆ. ಪಿಸಿಎಂಸಿ ವಿಭಾಗದಿಂದ 69 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 68 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.99.8 ಫಲಿತಾಂಶವನ್ನು ಎಸ್ ಟಿಜಿ ಸಂಸ್ಥೆಗೆ ತಂದಿರುತ್ತಾರೆ.

ಕನ್ನಡ ವಿಷಯದಲ್ಲಿ 14 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 32 ವಿದ್ಯಾರ್ಥಿಗಳು, ಜೀವಶಾಸ್ತ್ರ ವಿಷಯದಲ್ಲಿ 4 ವಿದ್ಯಾರ್ಥಿಗಳು, ಗಣಕಯಂತ್ರ ವಿಷಯದಲ್ಲಿ 3 ವಿದ್ಯಾರ್ಥಿಗಳು, ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರದಲ್ಲಿ ತಲಾ ಒರ್ವ ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಒಡೆತನದ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಹಿನ್ನೆಲೆಯಲ್ಲಿ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಈ ಸಾಧನೆಗೆ ಕಾರಣರಾದ ವಿದ್ಯಾರ್ಥಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಸಂಸ್ಥೆ ಅಧ್ಯಕ್ಷರು ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಹಾಗೂ ಸಂಸ್ಥೆ ಸಿಇಓ ಸಿ.ಪಿ.ಶಿವರಾಜು ಪುಟ್ಟರಾಜು ಹಾಗೂ ಆಡಳಿತಾಧಿಕಾರಿಗಳು ಅಭಿನಂದಿಸಿದ್ದಾರೆ.ಎಸ್.ಎಂ.ಅಂಜಲಿ ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ

ಕೆ.ಆರ್.ಪೇಟೆ: ಪಟ್ಟಣದ ಕದಂಬ ಕಾಲೇಜಿನ ವಿದ್ಯಾರ್ಥಿನಿ ಎಸ್.ಎಂ.ಅಂಜಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 584 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ.97.84 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.97.29 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ 584 ಅಂಕಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಎಸ್.ಎಂ.ಅಂಜಲಿ ಮತ್ತು ಅವರ ತಂದೆ ಕೃಷಿಕ ಸಿಂದಘಟ್ಟ ಮಂಜೇಗೌಡ ರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ, ಕಂದಬ ಸಂಸ್ಥೆ ಆಡಳಿತ ಮಂಡಳಿಯ ಮಂಜುನಾಥ್, ಕಿರಣ್, ಉಪನ್ಯಾಸಕರಾದ ಕೃಷ್ಣಪ್ಪ, ಶಾಂತಕುಮಾರ್, ಕರುಣಾನಿಧಿ, ಶಿಲ್ಪ, ಆದರ್ಶ, ಸುನೀಲ್ ಸೇರಿದಂತೆ ಹಲವರು ಇದ್ದರು.

Share this article