ಜಿಲ್ಲೆಯಲ್ಲಿ ಮೊದಲ ದಿನ ಪಿಯುಸಿ ಪರೀಕ್ಷೆ ಸುಗಮ

KannadaprabhaNewsNetwork |  
Published : Mar 01, 2026, 01:45 AM IST
ಪೊಟೊ: 28ಎಸ್‌ಎಂಜಿಕೆಪಿ09ಶಿವಮೊಗ್ಗ ನಗರದ ಸೈನ್ಸ್‌ ಮೈದಾನದಲ್ಲಿರುವ ಕೆಪಿಎಸ್‌ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಯನ್ನು ಪರಿಶೀಲಿಸುತ್ತಿರುವುದು.  | Kannada Prabha

ಸಾರಾಂಶ

ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ ಭಾಷೆ ಪರೀಕ್ಷೆಯಲ್ಲಿ ಒಟ್ಟು 15063 ವಿದ್ಯಾರ್ಥಿಗಳು ಹಾಜರಾಗಿದ್ದರೆ, 246 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ 41 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ ಭಾಷೆ ಪರೀಕ್ಷೆಯಲ್ಲಿ ಒಟ್ಟು 15063 ವಿದ್ಯಾರ್ಥಿಗಳು ಹಾಜರಾಗಿದ್ದರೆ, 246 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಈ ಬಾರಿ ಒಟ್ಟು 15309 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ ಮೊದಲ ದಿನವಾದ ಶನಿವಾರ ನಡೆದ ಕನ್ನಡ ಭಾಷೆ ಪರೀಕ್ಷೆಯಲ್ಲಿ ಶೇ.98.39 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆ ಸುಗಮವಾಗಿ ನಡೆದಿದೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು, ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ತಿಳಿಸಿದರು.

ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಪೊಲೀಸ್ ಭದ್ರತಾ ವ್ಯವಸ್ಥೆ ಕಂಡು ಬಂತು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್‌ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟ‌ರ್ ಸೆಂಟರ್‌ಗಳು ಮುಚ್ಚಿದ್ದವು.

ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ಪರಿಶೀಲನೆ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಗಿರಿ ತಾಲೂಕಿನ 5 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಮಾ.10ರಿಂದ ಕಡ್ಲೆ ಹಂಕ್ಲು ಮಾರಿಕಾಂಬ ಜಾತ್ರೆ