ಪಿಯುಸಿ: ಕಲಾ ವಿಭಾಗದಲ್ಲಿ ಎಚ್.ಬಿ.ತೇಜಸ್ವಿನಿ ಜಿಲ್ಲೆಗೆ ಪ್ರಥಮ

KannadaprabhaNewsNetwork |  
Published : May 01, 2026, 01:30 AM IST
೩೦ಕೆಎಂಎನ್‌ಡಿ-೫ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾವಿಭಾಗದಲ್ಲಿ ೫೮೧ ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ ಹೆಚ್.ಬಿ.ತೇಜಸ್ವಿನಿಯನ್ನು ಪಿಇಟಿ. ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಅಭಿನಂದಿಸಿದರು. | Kannada Prabha

ಸಾರಾಂಶ

೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಡ್ಯದ ಪಿಇಎಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಎಚ್.ಬಿ.ತೇಜಸ್ವಿನಿ ೫೮೧ ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮರು ಮೌಲ್ಯ ಮಾಪನದಲ್ಲಿ ೧೯ ಅಂಕಗಳು ಹೆಚ್ಚಳದೊಂದಿಗೆ ೫೮೧ ಅಂಕವನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ, ಮಂಡ್ಯ

೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಡ್ಯದ ಪಿಇಎಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಎಚ್.ಬಿ.ತೇಜಸ್ವಿನಿ ೫೮೧ ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮರು ಮೌಲ್ಯ ಮಾಪನದಲ್ಲಿ ೧೯ ಅಂಕಗಳು ಹೆಚ್ಚಳದೊಂದಿಗೆ ೫೮೧ ಅಂಕವನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಶಾಸ್ತ್ರ ವಿಷಯದಲ್ಲಿ ೧೦೦ಕ್ಕೆ ೧೦೦ ಅಂಕ ಪಡೆದುಕೊಂಡಿರುವುದು ವಿಶೇಷವಾಗಿದೆ. ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿಯನ್ನು ಪಿಇಟಿ. ಸಂಸ್ಥೆಯ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್ ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಸಣ್ಣಮೊಗ, ಉಪನ್ಯಾಸಕರಾದ ಲೋಕೇಶ್, ಸುರೇಶ್ ಹಾಗೂ ವಿದ್ಯಾರ್ಥಿನಿಯ ಪೋಷಕರು ಹಾಜರಿದ್ದರು.ನಾಳೆ ಜಿಲ್ಲಾ ವಕೀಲರ ಸಂಘದಿಂದ ಎಸ್.ಎಂ.ಕೃಷ್ಣ ಸಂಸ್ಮರಣೆ

ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾ ವಕೀಲರ ಸಂಘದಿಂದ ಮೇ ೨ರಂದು ಸಂಜೆ ೫ ಗಂಟೆಗೆ ಸಂಘದ ಆವರಣದಲ್ಲಿ ಸವಾಲುಗಳನ್ನು ಮೆಟ್ಟಿನಿಂತ ಅದ್ಭುತ ಆಡಳಿತಗಾರ ಜಂಟಲ್‌ಮನ್ ರಾಜಕಾರಣಿ ಎಸ್.ಎಂ.ಕೃಷ್ಣ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ತಿಳಿಸಿದ್ದಾರೆ.

ಮೈಸೂರು ರಾಮಕೃಷ್ಣ ಆಶ್ರಮ ಅಧ್ಯಕ್ಷ ಪರಮಪೂಜ್ಯ ಶ್ರೀಮುಕ್ತಿದಾನಂದ ಮಹಾರಾಜ್ ಸ್ವಾಮೀಜಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು.ಕಾರ್ಯಕ್ರಮದಲ್ಲಿ ೭೫ ವಸಂತ ಪೂರೈಸಿದ ಹಿರಿಯ ವಕೀಲ ಹಾಗೂ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರಿಗೆ ವಕೀಲರ ಸಂಘದ ಸಹೋದ್ಯೋಗಿ ಮಿತ್ರರಿಂದ ಅಭಿನಂದನಾ ಸಮರ್ಪಣೆ ಏರ್ಪಡಿಸಲಾಗಿದೆ. ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಅವರು ಗೌರವ ಸಮರ್ಪಣೆ ನೆರವೇರಿಸಲಿದ್ದಾರೆ ಎಂದು ಹೇಳಿದ್ದಾರೆ.

ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಅಧ್ಯಕ್ಷತೆ ವಹಿಸುವರು. ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ, ಡಾ.ಕೆ.ಸುಧಾಕರ್ ಅವರು ಮರೆತರು ಮರೆಯಲಾಗದ ಜಂಟಲ್ ಮನ್ ರಾಜಕಾರಣಿ ಎಸ್.ಎಂ.ಕೃಷ್ಣ ಕುರಿತು ಮಾತನಾಡುವರು. ಶಾಸಕರಾದ ಪಿ. ರವಿಕುಮಾರ್, ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಕೃಷ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸಿ. ಚಲುವಯ್ಯ ಅವರು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ ೫ ಗಂಟೆಗೆ ಸುಮಧುರ ವಾದ್ಯಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

66/11 ಕೆವಿ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ರಂಗಪಟ್ಟಣದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮನೆಗಳು ಜಖಂ