ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಸೆಸ್ಕಾಂ ಕಚೇರಿಯಲ್ಲಿ ಮೂರನೇ ಆಷಾಢ ಮಾಸದ ಅಂಗವಾಗಿ ಚಾಮುಂಡೇಶ್ವರಿ ಪೂಜಾ ಮಹೋತ್ಸವವು ಭಕ್ತಿ ಪ್ರಧಾನವಾಗಿ ಜರುಗಿತು.ಸೆಸ್ಕಾಂ ಆವರಣದಲ್ಲಿ ಚಾಮುಂಡೇಶ್ವರಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿವಿಧ ಹೂಗಳಿಂದ ಆಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ದೇವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು.
ಮಂಡ್ಯ ಸೆಸ್ಕಾಂ ಅಧೀಕ್ಷಕ ಎಂಜಿನಿಯರ್ ಸೋಮಶೇಖರ್, ಕಾರ್ಯನಿರ್ವಹಕ ಎಂಜಿನಿಯರ್ ಪುಟ್ಟಸ್ವಾಮಿ, ಸಹಾಯಕ ಲೆಕ್ಕಾಧಿಕಾರಿ ಸತೀಶ್, ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್‌ಗಳಾದ ಎಚ್.ಎಸ್ ಪ್ರೇಮ್‌ಕುಮಾರ್, ಇತೇಶ್ ಎಇಗಳಾದ ನಾಗೇಂದ್ರ, ಪ್ರಕಾಶ್, ಶಾಖಾಧಿಕಾರಿಗಳಾದ ಮಧು, ದಿವಾಕರ್, ಕಾಂತರಾಜು, ಶಿವಶಂಕರ್, ಶಿವಲಿಂಗು, ರಾಜಶೇಖರ್, ವಿಜೇಂದ್ರ, ನಂದೀಶ್, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಉಪಾಧ್ಯಕ್ಷ ಪರಶಿವಮೂರ್ತಿ ಸೇರಿದಂತೆ ಇತರರು ಇದ್ದರು.ಶ್ರೀಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಪುನಸ್ಕಾರ
ಕೆ.ಆರ್.ಪೇಟೆ: ಆಷಾಢ ಶುಕ್ರವಾರದ ಅಂಗವಾಗಿ ಪಟ್ಟಣ ಹೊರವಲಯದ ಶ್ರೀಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಪುನಸ್ಕಾರಗಳು ಶ್ರದ್ಧಾ ಭಕ್ತಿಯಿಂದ ನಡೆದವು.ದೇವಿಯ ದರ್ಶನಕ್ಕೆ ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತ ಸಮುದಾಯ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ತಾಯಿ ಚೌಡೇಶ್ವರಿ ಅಮ್ಮನವರ ಶಿಲಾಮೂರ್ತಿಯನ್ನು ಬೆಣ್ಣೆಯಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬಂದಿತ್ತು. ದೇಗುಲದ ಪ್ರದಾನ ಅರ್ಚಕ ರವಿಶಾಸ್ತ್ರಿ ನೇತೃತ್ವದಲ್ಲಿ ಪೂಜೆ ಪುರಸ್ಕಾರಗಳು ನಡೆದವು.ಶ್ರೀಚೌಡೇಶ್ವರಿ ಅಮ್ಮನವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎಚ್.ಆರ್ ಚಂದ್ರಶೇಖರ್, ಗೌರವಾಧ್ಯಕ್ಷ ಕೆ.ಆರ್.ನಾಗರಾಜ ಶೆಟ್ಟಿ, ಖಜಾಂಚಿ ಕೆ.ಆರ್.ಮಹೇಶ್, ಕಾರ್ಯದರ್ಶಿ ವಿದ್ಯಾರ್ಥಿ ಭಂಡಾರ್ ಸುರೇಶ್ ಸೇರಿದಂತೆ ಸಮಿತಿ ಸದಸ್ಯರು ಭಕ್ತರಿಗೆ ಯಾವುದೇ ಅಡಚಣೆಯಾಗದಂತೆ ಪೂಜಾ ವ್ಯವಸ್ಥೆಗಳನ್ನು ಮಾಡಿದ್ದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.