ಕನ್ನಡಪ್ರಭ ವಾರ್ತೆ ಅರಸೀಕೆರೆ
ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ಧರ್ಮಶೇಖರ್ ಗೀಜಿಹಳ್ಳಿ, ಕಳೆದ ಹಲವು ದಿನಗಳಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ವಿವಿಧ ಸಮಾಜಗಳ ಮುಖಂಡರು ಜಾತ್ಯತೀತವಾಗಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡುತ್ತಿದ್ದು, ಹಲವು ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳು ನಡೆಯುತ್ತಿರುವುದು ಅವರ ಮೇಲಿನ ಜನರ ವಿಶ್ವಾಸ ಮತ್ತು ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರಾಗಿರುವ ಕೆ.ಎಂ. ಶಿವಲಿಂಗೇಗೌಡರು ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಭರವಸೆಯಂತೆ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದರು.ರಾಜ್ಯ ನಾಯಕರು ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದು, ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಘೋಷಣೆಯಾಗುವ ನಿರೀಕ್ಷೆ ಇದೆ. ಅವರ ಸಚಿವ ಸ್ಥಾನದ ಮಾರ್ಗದಲ್ಲಿರುವ ಎಲ್ಲ ಅಡೆತಡೆಗಳು ನಿವಾರಣೆಯಾಗಲಿ ಹಾಗೂ ಜಿಲ್ಲೆ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ಇನ್ನಷ್ಟು ಸೇವೆ ಸಲ್ಲಿಸುವ ಅವಕಾಶ ದೊರೆಯಲಿ ಎಂಬ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಧರ್ಮಶೇಖರ್ ಗೀಜಿಹಳ್ಳಿ ಹೇಳಿದರು.