ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿಕ್ಕಮರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪೂಜಾರಿ ಮಧುಸೂದನ್, ರೈತಸಂಘ-ಕಾಂಗ್ರೆಸ್ ಅಭ್ಯರ್ಥಿ ಪಾಪಯ್ಯ ಅವಿರೋಧವಾಗಿ ಆಯ್ಕೆಯಾದರು.ಸಂಘದ ಹಿಂದಿನ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ರಾಜಪ್ಪ ಅವರಿಂದ ತೆರವಾದ ಸ್ಥಾನಗಳಿಗೆ ಪೂಜಾರಿ ಮಧುಸೂದನ್, ಪಾಪಯ್ಯ ನಾಮಪತ್ರ ಸಲ್ಲಿಸಿದರು. ಇವರನ್ನು ಹೊರತುಪಡಿಸಿ ಉಳಿದ ಯಾವೊಬ್ಬ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷರಾಗಿ ಪೂಜಾರಿ ಮಧುಸೂದನ್, ಉಪಾಧ್ಯಕ್ಷರಾಗಿ ಪಾಪಯ್ಯ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಘೋಷಿಸಿದರು.
ನೂತನ ಅಧ್ಯಕ್ಷ ಮಧುಸೂದನ್, ಉಪಾಧ್ಯಕ್ಷ ಪಾಪಯ್ಯ ಅವರನ್ನು ಎಲ್ಲಾ ನಿರ್ದೇಶಕರು, ಮುಖಂಡರು ಅಭಿನಂದಿಸಿದರು. ಈ ವೇಳೆ ನಿರ್ದೇಶಕರಾದ ಪ್ರಕಾಶ, ಜಯರಾಮ, ಚಿಕ್ಕೀರಶೆಟ್ಟಿ, ಲೋಕೇಶ್, ರಾಜಪ್ಪ, ರಾಮಕೃಷ್ಣ, ನಾಗಮ್ಮ, ಮಂಜುಳ, ಕಾರ್‍ಯದರ್ಶಿ ಪುನೀತ್, ಮನ್‌ಮುಲ್ ಮಾಜಿ ಅಧ್ಯಕ್ಷ ಸಿ.ಸ್ವಾಮೀಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಪಿ.ರಮೇಶ್, ತಾಪಂ ಮಾಜಿ ಸದಸ್ಯೆ ಮಂಗಳನವೀನ್‌ಕುಮಾರ್, ನವೀನ್, ರಾಮಕೃಷ್ಣೇಗೌಡ ಸೇರಿದಂತೆ ಹಲವರು ಹಾಜರಿದ್ದರು.ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮಶ್ರೀರಂಗಪಟ್ಟಣ:ಪಟ್ಟಣದ ಬಸ್ ನಿಲ್ದಾಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ಪುರಸಭೆ ಹಾಗೂ ಸ್ಥಳೀಯ ಆರೋಗ್ಯ ಇಲಾಖೆ ಆಶ್ರಯದಲ್ಲಿ ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಶಾಸಕ ರಮೇಶ ಬಂಡಿಸಿದ್ದೇಗೌಡ, ಡೀಸಿ ಡಾ.ಕುಮಾರ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಕರಪತ್ರ ವಿತರಿಸುವ ಮೂಲಕ ಅರಿವು ಮೂಡಿಸಿದರು.ನಂತರ ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಸಂಚರಿಸಿ, ಕರಪತ್ರ ವಿತರಿಸಿ ಪುರಸಭೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಡೆಂಘೀ ನಿಯಂತ್ರಣ ಕುರಿತು ಘೋಷಣೆ ಕೂಗಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.ಈ ವೇಳೆ ಡಿಎಚ್ ಒ ಡಾ.ಕೆ ಮೋಹನ್, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ತಾಪಂ ಇಒ ವೇಣು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್ ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ ಟಿ.ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ಆರೋಗ್ಯ ಇಲಾಖೆಯ ಕ್ಷೇತ್ರ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.