ಪಲ್ಸ್‌ ಪೋಲಿಯೋಗೆ ಸಂಘ ಸಂಸ್ಥೆಗಳ ಸಹಕಾರದಿಂದ ಉತ್ತಮ ಸಾಧನೆ: ಡಾ.ನರಸಿಂಹಮೂರ್ತಿ

KannadaprabhaNewsNetwork |  
Published : Dec 28, 2025, 03:00 AM IST
 ನರಸಿಂಹರಾಜಪುರ ಬಸ್ಸು ನಿಲ್ದಾಣದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯವರು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನರಸಿಂಹಮೂರ್ತಿ ಅವರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸರ್ಕಾರದ ಜೊತೆ ಸಂಘ, ಸಂಸ್ಥೆಗಳು ಕೈ ಜೋಡಿಸಿದ್ದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸರ್ಕಾರದ ಜೊತೆ ಸಂಘ, ಸಂಸ್ಥೆಗಳು ಕೈ ಜೋಡಿಸಿದ್ದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ತಿಳಿಸಿದರು.

ಮಂಗಳವಾರ ಬಸ್ಸು ನಿಲ್ದಾಣದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ದತ್ತು ಪಡೆದು ನಿರ್ವಹಣೆ ಮಾಡಿದ್ದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಸ್ಸು ನಿಲ್ದಾಣದ ಪಲ್ಸ್ ಪೋಲಿಯೋ ಕೇಂದ್ರದಲ್ಲಿ 3 ದಿನದಲ್ಲಿ 199 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ತಾಲೂಕಿನಲ್ಲಿ 4802 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 4879 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು ಗುರಿಗಿಂತ ಜಾಸ್ತಿ ಲಸಿಕೆ ಹಾಕಿ ಶೇ.101 ರಷ್ಟು ಸಾಧನೆ ಮಾಡಿದ್ದೇವೆ. ಈ ಸಾಧನೆ ಮಾಡಲು ಆರೋಗ್ಯ ಇಲಾಖೆ ಎಲ್ಲಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳು ಕಾರಣವಾಗಿದೆ ಎಂದರು.

ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ಮಾತನಾಡಿ, 2009 ರಲ್ಲಿ ಪ್ರಥಮ ಬಾರಿಗೆ ಜೇಸಿ ಸಂಸ್ಥೆಯಿಂದ ಬಸ್‌ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರವನ್ನು ದತ್ತು ಪಡೆಯಲಾಗಿತ್ತು. ಆ ವರ್ಷದಿಂದ ಪ್ರತಿ ವರ್ಷ ಬಸ್‌ ನಿಲ್ದಾಣದಲ್ಲಿ ಜೇಸಿ ಸಂಸ್ಥೆಯಿಂದ ಲಸಿಕಾ ಕೇಂದ್ರ ನಿರ್ವಹಿಸುತ್ತಿದ್ದೇವೆ. 2009 ರಲ್ಲಿ ಜೇಸಿ ಅಧ್ಯಕ್ಷರಾಗಿದ್ದ ಪಿ.ಆರ್. ಸುಕುಮಾರ್ ಅವರನ್ನು ಇಂದು ಸನ್ಮಾನಿಸಲಾಗುವುದು ಎಂದರು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಜಗದೀಶ್ ಮಾತನಾಡಿ, ಜೇಸಿ ಸಂಸ್ಥೆ ಸಮಾಜ ಮುಖಿ ಕೆಲಸ ಮಾಡುತ್ತಿದೆ. ಬಸ್ಸು ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರದ ಜೊತೆ ಸೆಲ್ಫಿ ಪ್ರಾರಂಭಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೇಸಿ ಪೂರ್ವಾಧ್ಯಕ್ಷ ಅಭಿನವ ಗಿರಿರಾಜ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ನರಸಿಂಹಮೂರ್ತಿ ಹಾಗೂ ಜೇಸಿ ಪೂರ್ವಾಧ್ಯಕ್ಷ ಪಿ.ಆರ್.ಸುಕುಮಾರ್ ಅವರನ್ನು ಜೇಸಿ ಸಂಸ್ಥೆಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೇಸಿ ಕಾರ್ಯದರ್ಶಿ ರಜತ್ ವಗಡೆ ಹಾಗೂ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ