ಕನ್ನಡಪ್ರಭ ವಾರ್ತೆ ಕೋಲಾರರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಡಿ.೨೧ ರಿಂದ ೨೪ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ೫ ವರ್ಷದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪ್ರತಿಯೊಬ್ಬ ಪೋಷಕರೂ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಮತ್ತು ಶೇ.೧೦೦ರಷ್ಟು ಸಾಧನೆ ಮಾಡಬೇಕು ಎಂದು ಡಿಎಚ್‌ಓ ಡಾ.ಜಿ.ಶ್ರೀನಿವಾಸ್ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತವನ್ನು ಪೋಲಿಯೊ ಮುಕ್ತವನ್ನಾಗಿಸಲು ೧೯೯೭ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಯೋಜನೆಯಿಂದಾಗಿ ದೇಶದಲ್ಲಿ ಪ್ರಗತಿ ಸಾಧಿಸಲಾಗಿದೆ. ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ರಾಜ್ಯ-ಕೇಂದ್ರ ಸರ್ಕಾರ ಪೋಲಿಯೋದಿಂದ ಉಂಟಾಗುವ ಅಂಗವಿಕಲತೆಯೊಂದಿಗೆ ಭೀಕರ ಪರಿಣಾಮಗಳನ್ನು ಬೀರಬಹುದಾದ ರೋಗ ತಡೆಗಟ್ಟಲು ಪೋಲಿಯೊ ಲಸಿಕೆ ಮಕ್ಕಳಿಗೆ ಹಾಕಿಸಬೇಕು ಎಂದರು.
ಗ್ರಾಮೀಣ-ನಗರ ಪ್ರದೇಶದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ ೦-೫ ವರ್ಷದೊಳಗಿನ ಯಾವುದೇ ಮಗು ಲಸಿಕೆ ಸೌಲಭ್ಯದಿಂದ ಹೊರಗುಳಿಯಬಾರದು. ಬೂತ್‌ಗಳಲ್ಲಿ ಡಿ.೨೧ ಭಾನುವಾರ ಬೆಳಗ್ಗೆ ೮ ಗಂಟೆಯಿಂದ ಸಂಜೆ ೫ ಗಂಟೆವರೆಗೂ ಪೋಲಿಯೋ ಲಸಿಕೆ ಹಾಕಲಾಗುವುದು ಎಂದು ವಿವರಿಸಿದರು.
ಡಿ.೨೨, ೨೩, ೨೪ರಂದು ಮೂರು ದಿನಗಳ ಕಾಲ ಪ್ರತಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ. ಯಾವ ಮಗುವು ಸಹ ತಪ್ಪಿಸಿಕೊಳ್ಳದೇ ಲಸಿಕೆ ಹಾಕಿಸಿಕೊಳ್ಳಬೇಕು. ವಿವಿಧ ರಾಜ್ಯಗಳಿಂದ ಉದ್ಯೋಗ ಹರಸಿ ಬಂದಂತಹ ಕಾರ್ಮಿಕ ಕುಟುಂಬ ಮಕ್ಕಳನ್ನೂ ಗುರುತಿಸಿ ಹಾಕಲಾಗುತ್ತದೆ. ಜಿಲ್ಲೆಯಲ್ಲಿ ೫ ವರ್ಷದೊಳಗಿನ ಒಟ್ಟು ೧,೬೩,೫೦೮ ಮಕ್ಕಳಿದ್ದು, ೭೩೮ ಬೂತ್‌ಗಳನ್ನು ಗುರುತಿಸಲಾಗಿದೆ ಎ₹ದರು.ಲಸಿಕೆ ಕುರಿತು ಪ್ರಚಾರ:
ಲಸಿಕೆ ನೀಡಲು ೩೭ ತಂಡಗಳನ್ನು ರಚಿಸಲಾಗಿದೆ. ೩೦೬೪ ಲಸಿಕೆದಾರರನ್ನು ನೇಮಿಸದ್ದು, ೧೬೪ ಮೇಲ್ವಿಚಾರಕರನ್ನು ಗುರುತಿಸಿದ್ದು, ಪ್ರತಿಯೊಬ್ಬರಿಗೂ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸಬೇಕು. ಈಗಾಗಲೇ ನಗರಸಭೆ ಮತ್ತು ಇನ್ನಿತರೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ, ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.ಲಸಿಕೆ ನೀಡುವ ಗುರಿಯು ಇನ್ನೂ ಹೆಚ್ಚಾಗುವ ಸಂಭವವಿದ್ದು, ಇವರೆಲ್ಲರಿಗೂ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಸಿಂಗ್ ವಿದ್ಯಾರ್ಥಿಗಳು, ಸ್ವಯಂ ಸೇವಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲೆಯಾದ್ಯಂತ ತಾಲ್ಲೂಕು ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.ಅಭಿಯಾನದಲ್ಲಿ ಅಧಿಕಾರಿಗಳು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕರ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರಸಭೆ, ಪುರಸಭೆ ಮತ್ತು ಸ್ವಯಂ ಸಂಘಗಳು ಹಾಗೂ ಇತರೆ ಇಲಾಖೆಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಆರ್.ಸಿ.ಹೆಚ್. ಮತ್ತು ರಾಷ್ಟ್ರೀಯ ಪಲ್ಸ್ ಪೋಲಿಯೋ ಜಿಲ್ಲಾ ನೋಡಲ್ ಅಧಿಕಾರಿ ಡಾ.ಚಾರಿಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ ಇದ್ದರು.