5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ

KannadaprabhaNewsNetwork |  
Published : Dec 17, 2025, 01:00 AM IST
16ಕೆಆರ್ ಎಂಎನ್ 5.ಜೆಪಿಜಿರಾಮನಗರದ ತಾಲ್ಲೂಕು ಪಂಚಾಯಿತಿ ತಹಸೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ರಾಮನಗರ: ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, 0-5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡುವಂತೆ ಗ್ರೇಡ್-2 ತಹಸೀಲ್ದಾರ್‌ ಜಯಣ್ಣ ಅವರು ತಾಲೂಕು ಆರೋಗ್ಯ ಸಿಬ್ಬಂದಿಗೆ ಸೂಚಿಸಿದರು.

ರಾಮನಗರ: ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, 0-5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡುವಂತೆ ಗ್ರೇಡ್-2 ತಹಸೀಲ್ದಾರ್‌ ಜಯಣ್ಣ ಅವರು ತಾಲೂಕು ಆರೋಗ್ಯ ಸಿಬ್ಬಂದಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ತಹಸೀಲ್ದಾರ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪಲ್ಸ್ ಪೋಲಿಯೊ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

ನಗರಸಭೆ ಕಸ ವಿಲೇವಾರಿ ವಾಹನಗಳಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಕುರಿತು ಆಡಿಯೋ ಜಿಂಗಲ್ಸ್ಗಳ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಹೋರ್ಡಿಂಗ್ಸ್ ಗಳನ್ನು ಅಳವಡಿಸುವಂತೆ ಹಾಗೂ ರೋಟರಿ, ಲಯನ್ಸ್, ರೋಟರಿ ಸಿಲ್ಕ್ ಸಿಟಿ ಸಂಸ್ಥೆಯವರು ಈ ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಉಮಾ ಅವರು ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮವು ಡಿ. 21 ರಿಂದ 24 ರವರೆಗೆ ನಡೆಯಲ್ಲಿದ್ದು, ಪಲ್ಸ್ ಪೋಲಿಯೋ ಹನಿ ನೀಡಲು ರಾಮನಗರ ತಾಲ್ಲೂಕಿನಲ್ಲಿ ಒಟ್ಟು 135 ತಂಡಗಳನ್ನು ರಚಿಸಲಾಗಿದೆ. 22,251 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ, ಟೋಲ್‌ಗಳಲ್ಲಿ, ಟ್ರಾನ್‌ಸಿಟ್ ಬೂತ್‌ಗಳು ಹಾಗೂ 3 ಮೊಬೈಲ್ ತಂಡಗಳು ತಾಲ್ಲೂಕಿನಾದ್ಯಂತ ಕಾರ್ಯನಿರ್ವಹಿಸಲಿವೆ ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು. ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ಪ್ರಮುಖವಾಗಿ ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ಮಾಡದಿರಲು ಹೆಚ್ಚಿನ ಕ್ರಮವಹಿಸಲು ತಿಳಿಸಿದರು ಹಾಗೂ ಪ್ರಸಕ್ತ ವರ್ಷದಲ್ಲಿ ರಾಮನಗರ ತಾಲ್ಲೂಕಿನಲ್ಲಿ ಒಟ್ಟು 13 ಕಾರ್ಯಚರಣೆ ನಡೆಸಿ 21,490 ರು. ದಂಡ ವಿಧಿಸಲಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಭೆಯಲ್ಲಿ ಉಪ ತಹಸೀಲ್ದಾರ್ ರುದ್ರಮ್ಮ, ಮಕ್ಕಳ ತಜ್ಞೆ ಡಾ. ನಳಿನಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಅರ್ಪಿತ, ಆರೋಗ್ಯ ಇಲಾಖೆ, ರಾಮನಗರ ನಗರಸಭೆ, ಬಿಡದಿ ಪುರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಕ್ಫ್ ಬೋರ್ಡ್, ಆರ್.ಟಿ.ಒ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ರೋಟರಿ ಸಂಸ್ಥೆಯ ಅಧ್ಯಕ್ಷೆ ಸೌಮ್ಯ ಕುಮಾರಸ್ವಾಮಿ, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಪ್ರಕಾಶ್, ಅಲೆಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಲಾವಣ್ಯ, ಫಯಾಜ್, ದಾಸಯ್ಯ, ಉಮಾದೇವಿ, ಕೃಷ್ಣಮೂರ್ತಿ ಹಾಜರಿದ್ದರು.

16ಕೆಆರ್ ಎಂಎನ್ 5.ಜೆಪಿಜಿ

ರಾಮನಗರದ ತಾಲ್ಲೂಕು ಪಂಚಾಯಿತಿ ತಹಸೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪಲ್ಸ್ ಪೋಲಿಯೊ ಕಾರ್ಯಪಡೆ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!