ಪಲ್ಸ್ ಪೋಲಿಯೋ ಕಾರ್ಯಕ್ರಮ: ಮೈಕ್ರೋ ಪ್ಲಾನ್ ಸಿದ್ಧಪಡಿಸಲು ಸೂಚನೆ

KannadaprabhaNewsNetwork |  
Published : Dec 04, 2025, 01:15 AM IST
ೂೂೂಬ | Kannada Prabha

ಸಾರಾಂಶ

ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೈಕ್ರೋ ಪ್ಲಾನ್ ಸಿದ್ಧಪಡಿಸಬೇಕೆಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಯೋಗೀಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮೈಕ್ರೋ ಪ್ಲಾನ್ ಸಿದ್ಧಪಡಿಸಬೇಕೆಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ಯೋಗೀಶ್ ತಿಳಿಸಿದರು. ಬುಧವಾರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿಸೆಂಬರ್ 21ರಿಂದ 24ರವರೆಗೆ ನಡೆಯಲಿದ್ದು, ಡಿಸೆಂಬರ್ 22 ರಿಂದ ಡಿ.24ರವರೆಗೆ ಮನೆ-ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ನವಜಾತ ಶಿಶುವಿನಿಂದ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೊ ಲಸಿಕೆ ನೀಡಬೇಕೆಂದರಲ್ಲದೆ, ಗುರುತಿಸಿರುವ ಪೋಲಿಯೋ ಬೂತ್, ನಮ್ಮ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆ, ರೆಫರಲ್ ಆಸ್ಪತ್ರೆ, ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಅವರು ಹೇಳಿದರು.ಪಾಲಿಕೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ಪಲ್ಸ್ ಫೋಲಿಯೊ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮದ ಗುರಿ ಸಾಧಿಸಲು ಆರೋಗ್ಯ ಇಲಾಖೆ, ರೋಟರಿ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನರ್ಸಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ಪ್ಯಾರಾಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರನ್ನಾಗಿ ಬಳಸಿಕೊಳ್ಳಬೇಕು. ನಗರ ವ್ಯಾಪ್ತಿಯ ೫ ವರ್ಷದೊಳಗಿನ ಯಾವುದೇ ಮಕ್ಕಳು ಪೋಲಿಯೊ ಹನಿಯಿಂದ ವಂಚಿತರಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಸಂಚಾರಿ ಲಸಿಕಾ ತಂಡಗಳ ಮೂಲಕ ನಗರದ ಬಸ್ ನಿಲ್ದಾಣ, ಮಾರುಕಟ್ಟೆ, ರೈಲ್ವೇ, ದೇವಾಲಯ, ಮಾಲ್, ಪ್ರಮುಖ ಉದ್ಯಾನವನ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಪೋಲಿಯೊ ಹನಿ ಹಾಕಬೇಕು ಎಂದು ಅವರು ಹೇಳಿದರು.ನಗರದಲ್ಲಿ ಪಲ್ಸ್ ಪೊಲಿಯೋ ಕಾರ್ಯಕ್ರಮದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದೈನಂದಿನ ಕಸ ವಿಲೇವಾರಿ ಮಾಡುವ ವಾಹನಗಳ ಜೊತೆಗೆ, ಸರ್ಕಾರಿ ಬಸ್ ನಿಲ್ದಾಣ ಹಾಗೂ ರೇಲ್ವೇ ನಿಲ್ದಾಣಗಳಲ್ಲಿ ಧ್ವನಿಮುದ್ರಿಕೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಹೆಚ್ಚಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಇರುವ ರಸ್ತೆ ಮತ್ತು ಸರ್ಕಲ್‌ಗಳಲ್ಲಿ ಬ್ಯಾನರ್‌ಗಳು ಅಳವಡಿಸಿ ಕರಪತ್ರಗಳನ್ನು ಹಂಚಬೇಕು ಎಂದು ಅವರು ಹೇಳಿದರುಈ ವೇಳೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಮೋಹನ್ ಸಿ.ಆರ್., ವಿಶ್ವ ಆರೋಗ್ಯ ಸಂಸ್ಥೆಯ ಎಸ್.ಎಂ.ಓ ಡಾ. ಸುಧೀರ್ ನಾಯ್ಕ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಿಕಾಂತ ಎಸ್.ಆರ್., ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಮಂಜೇಶ್ ಎನ್. ಸೇರಿದಂತೆ ರೋಟರಿ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಡಘಟ್ಟ ಗ್ರಾ.ಪಂ.ಗೆ ಗಾಂಧೀಗ್ರಾಮ ಪುರಸ್ಕಾರ: ರುದ್ರಮ್ಮ ಬಸವರಾಜು
ಕಳವಾಗಿದ್ದ ಮೊಬೈಲ್‌ಗಳ ಪತ್ತೆ: ವಾರಸುದಾರರಿಗೆ ಹಸ್ತಾಂತರ