ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ. ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಭಾನುವಾರ ಲೇಡಿಗೋಶನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.
ಮಹಾನಗರಪಾಲಿಕೆ ಸದಸ್ಯೆ ಪೂಣಿ೯ಮಾ ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆ ಅಧೀಕ್ಷಕಿ ಡಾ.ಜೆಸಿಂತಾ, ಲೇಡಿಗೋಷನ್ ಆಸ್ಪತ್ರೆ ಅಧೀಕ್ಷಕ ಡಾ. ದುಗಾ೯ಪ್ರಸಾದ್, ಆರ್.ಸಿ.ಎಚ್.ಅಧಿಕಾರಿ ಡಾ. ರಾಜೇಶ್, ಡಾ. ಸದಾಶಿವ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಮತ್ತಿತರರು ಇದ್ದರು.
ದ.ಕ.ಜಿಲ್ಲೆಯಾದ್ಯಂತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಬಸ್ ನಿಲ್ದಾಣಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರ ಕಾರ್ಯನಿರ್ವಹಿಸಿದೆ.
ಬಂಟ್ವಾಳ ಪೋಲಿಯೋ ಲಿಸಿಕಾ ಅಭಿಯಾನ ಬಂಟ್ವಾಳ: ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.
ತಾಲೂಕು ಆಡಳಿತಾಧಿಕಾರಿ ಡಾ. ಪುಷ್ಪಲತಾ, ರೋಟರಿ ಕ್ಲಬ್ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ತಾಲೂಕಿನಾದ್ಯಂತ ೧೯೦ ಬೂತ್ ಗಳಲ್ಲಿ ೭೮೪ ಕಾರ್ಯಕರ್ತೆಯರು ೦-೫ ವರ್ಷದೊಳಗಿನ ೩೦೬೫೧ ಪುಟಾಣಿಗಳಿಗೆ ಪೊಲಿಯೋ ಹನಿ ನೀಡಲಿದ್ದಾರೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಮೂಡುಬಿದಿರೆ: ಪೋಲಿಯೋ ಲಸಿಕಾ ಅಭಿಯಾನ ಮೂಡುಬಿದಿರೆ: ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ., ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಮಕ್ಕಳ ತಜ್ಞರಾದ ಡಾ. ಮುರಳೀಕೃಷ್ಣ, ಡಾ. ವಸಂತ್, ಹಿರಿಯ ಆರೋಗ್ಯ ಮೇಲ್ವೀಚಾರಕಿ ಶಾಂತಮ್ಮ ಹಾಗೂ ರೋಟರಿ ಕ್ಲಬ್ ಸದಸ್ಯರು ಈ ಸಂದರ್ಭದಲ್ಲಿದ್ದರು.