ಕಿಕ್ಕೇರಿ:
ಇಲ್ಲಿನ 3ನೇ ವೃತ್ತದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿ ಮಾತನಾಡಿ, ಮಕ್ಕಳಿಗೆ ಜೀವಾಮೃತವಾಗಿ ಹನಿಯಿದ್ದು 3 ದಿನಗಳವರೆಗೆ ನಡೆಯುವ ಲಸಿಕೆ ಕಾರ್ಯಕ್ರಮಕ್ಕೆ ಸಹಕರಿಸಿ ಎಂದರು.
ಮಕ್ಕಳಿಗೆ ಅಂಗವೈಕಲ್ಯತೆ ಎನ್ನುವುದು ಶಾಪವಲ್ಲ. ಮಕ್ಕಳಿಗೆ ಪೋಲಿಯೋ ವಿರುದ್ಧ ಲಸಿಕೆ ಹಾಕಿಸಿದ್ದಲ್ಲಿ ಇಂತಹ ಗಂಡಾಂತರ ಬರಲಾರದು. ಲಿಂಗತಾರತಮ್ಯವಿಲ್ಲದೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಲೇಬೇಕು ಎಂದರು.ಟಿಎಪಿಸಿಎಂಎಸ್ ನಿರ್ದೇಶಕ ಕೆ.ಬಿ.ಮಧು ಮಾತನಾಡಿ, ಸೋಮವಾರದಿಂದ 2 ದಿನಗಳು ಮನೆ, ಬಸ್‌ನಿಲ್ದಾಣದಂತಹ ಪ್ರಮುಖ ಕೇಂದ್ರದಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಕಬ್ಬು ಕಟಾವು, ಕೂಲಿ ಕಾರ್ಮಿಕರು ಇರುವಂತಹ ಜನಪ್ರದೇಶಗಳಲ್ಲಿನ ವಲಸಿಗ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಸಂಘ ಸಂಸ್ಥೆ, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ವೇಳೆ ಆಶಾ ಕಾರ್ಯಕರ್ತೆ ಮಂಜುಳಾ, ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ರಮೇಶ್ ಮತ್ತಿತರರಿದ್ದರು.
ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ನಾನಾ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿ ಕಾರ್ಯಕ್ರಮವನ್ನು ಜೂ.೩೦ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಎ.ಸಿ.ರಮೇಶ್ ತಿಳಿಸಿದರು.ಜಯಂತಿ ಹಿನ್ನಲೆಯಲ್ಲಿ ಕೆಂಪೇಗೌಡರ ಭಾವಚಿತ್ರದ ಮೆರವಣಿಗೆಗೆ ಅಂದು ಬೆಳಗ್ಗೆ ೯.೩೦ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಚಾಲನೆ ನೀಡಲಾಗುವುದು. ಮೆರವಣಿಗೆಯು ಜೆ.ಸಿ ವೃತ್ತ, ಮಹಾವೀರ ವೃತ್ತ, ವಿವಿ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಎಂ.ಅಂಕೇಗೌಡ, ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಜಿಲ್ಲೆಯ ಧನಂಜಯ, ಮುತ್ತೇಶ್‌ಗೌಡ, ಜಿಲ್ಲಾ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ತಲಾ ಓರ್ವ ಪ್ರಗತಿಪರ ರೈತರು, ಪಿಯುಸಿಯ ೩ ವಿಭಾಗಗಳಿಂದ ತಲಾ ಓರ್ವ ಪ್ರತಿಭಾನ್ವಿತ ವಿದ್ಯಾರ್ಥಿಯಂತೆ ೭ ತಾಲೂಕಿನಿಂದ ಸೇರಿ ೨೧ ಮಂದಿ, ಎಸ್ಸೆಸ್ಸೆಲ್ಸಿಯಲ್ಲಿ ಮೊದಲ ಮೂರು ಸ್ಥಾನ ಪಡೆದ ೨೧ ಮಂದಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ೩ ಎಸ್ಸೆಸ್ಸೆಲ್ಸಿ ಹಾಗೂ ೯ ಪಿಯುಸಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದು ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸಿ.ರವೀಂದ್ರ, ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಉಪಾಧ್ಯಕ್ಷ ಶಿವಶಂಕರ್, ವೇಣುಗೋಪಾಲ್, ಎಸ್.ನಾರಾಯಣ್, ಬಿ.ಆರ್.ಕೃಷ್ಣೇಗೌಡ, ಎಲ್.ಕೃಷ್ಣ ಇದ್ದರು.