ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರದಿಂದ ಜುಲೈ 1 ವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ.ಡಿ ತಿಳಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರದಿಂದ ಜುಲೈ 1 ವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ.ಡಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಒಟ್ಟು 2,10,529 ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಅದಕ್ಕಾಗಿ 1,282 ಪೊಲೀಯೋ ಬೂತಗಳನ್ನು ಸ್ಥಾಪಿಸಲಾಗಿದೆ. ಒಟ್ಟು 4,07,777 ಮನೆಗಳನ್ನು ಗುರುತಿಸಿ ಭೇಟಿ ನೀಡಲು 1,390 ತಂಡಗಳನ್ನು ರಚಿಸಲಾಗಿದ್ದು, ಈ ಕಾರ್ಯಕ್ರಮದ ಮೇಲ್ವಿಚಾರಣೆಗೆ ಒಟ್ಟು 265 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
ತೋಟದ ಮನೆಗಳನ್ನು ಭೇಟಿ ಮಾಡಲು 63 ಮೊಬೈಲ್ ತಂಡಗಳನ್ನು ಗುರುತಿಸಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ತಾಣಗಳು, ಪ್ರಸಿದ್ಧ ದೇವಾಲಯಗಳಿಗೆ ಬರುವ ಮಕ್ಕಳಿಗೆ ಲಸಿಕೆಯನ್ನು ಹಾಕಲು 45 ಟ್ರಾನ್ಸಿಸ್ಟ್ ತಂಡಗಳನ್ನು ರಚಿಸಲಾಗಿದೆ. 0-5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.