ಪಲ್ಸ್‌ ಪೋಲಿಯೋ ಲಸಿಕೆ: ಶೇ.100 ಗುರಿ ಸಾಧನೆ ವಿಶ್ವಾಸ

KannadaprabhaNewsNetwork |  
Published : Dec 17, 2025, 02:00 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಪೋಷಕರು ತಮ್ಮ 0-5 ವರ್ಷದೊಳಗಿನ ಮಕ್ಕಳನ್ನು ಹತ್ತಿರದ ಪೊಲಿಯೋ ಬೂತ್‌ಗಳಿಗೆ ಕರೆದುಕೊಂಡು ಬಂದು ಉಚಿತ ಪೊಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, 24/7 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ನಮ್ಮ ಕ್ಲಿನಿಕ್‌ಗಳಲ್ಲಿ ಹಾಗೂ ಆಯ್ದ ಶಾಲಾ, ಅಂಗನವಾಡಿ ಕೇಂದ್ರಗಳಲ್ಲಿ, ಸಾರ್ವಜನಿಕ ಸ್ಥಳಗಳಾದ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ರಸ್ತೆ ಟೋಲ್‌ ಗೇಟ್‌ಗಳಲ್ಲಿ ಪೊಲಿಯೋ ಬೂತ್ ಗಳನ್ನು ತೆರೆಯಲಾಗುತ್ತದೆ ಎಂದರು.

ಪೊಲಿಯೋ ಲಸಿಕೆ ಹಾಕಲು ಜಿಲ್ಲೆಯಲ್ಲಿ ಅವಶ್ಯಕತೆ ಇರುವಷ್ಟು ಪೋಲಿಯೋ ಬೂತ್ ತೆರೆಯಬೇಕು, ಲಸಿಕೆ ಹಾಕುವವರಿಗೆ ಸೂಕ್ತ ತರಬೇತಿ ನೀಡಿ, ಟಾರ್ಗೆಟ್ ಫಿಕ್ಸ್ ಮಾಡಿ. ಲಸಿಕೆ ವಂಚಿತ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ಹಾಕಬೇಕು, ವಲಸೆ ಕಾರ್ಮಿಕರ ಮಕ್ಕಳಿಗೂ ಲಸಿಕೆ ಹಾಕಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಕಳೆದ 8 ತಿಂಗಳಲ್ಲಿ 18 ಶಿಶುಗಳ ಸಾವು:

ಕಳೆದ ಏಪ್ರಿಲ್‌ನಿಂದ ನವೆಂಬರ್‌ವರೆಗೆ 0-1 ವರ್ಷದೊಳಗಿನ 18 ಶಿಶುಗಳು ಸಾವನ್ನಪ್ಪಿದ್ದು ಹೊಸಕೋಟೆ 07, ದೇವನಹಳ್ಳಿ 02, ದೊಡ್ಡಬಳ್ಳಾಪುರ 05 ಹಾಗೂ ನೆಲಮಂಗಲ 04 ಶಿಶುಗಳು ಸಾವನ್ನಪ್ಪಿವೆ. ಜೊತೆಗೆ 1-5 ವರ್ಷದೊಳಗಿನ 4 ಮಕ್ಕಳು ಹಾಗೂ ಮೂವರು ಗರ್ಭಿಣಿಯರು ಸಾವನ್ನಪ್ಪಿದ್ದಾರೆ. ತಾಯಿ ಮತ್ತು ಶಿಶು ಮರಣ ಪರೀಶೀಲನೆ ಸಭೆ ನಡೆಸಿ ಶಿಶು, ಮಕ್ಕಳು ಮತ್ತು ಗರ್ಭಿಣಿಯರ ಆರೈಕೆ, ಆರೋಗ್ಯ ಸಂರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರು, ನರ್ಸ್ ಗಳು, ವೈದ್ಯರ ಪಾತ್ರ ಬಹಳ ಮುಖ್ಯ. ಜಿಲ್ಲೆಯಲ್ಲಿ ಮಕ್ಕಳ, ಗರ್ಭಿಣಿಯರ ಸಾವು ತಪ್ಪಿಸುವುದು ನಿಮ್ಮ ಕೈಯಲ್ಲಿದೆ. ಮಕ್ಕಳ ಆರೈಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು, ಅವಶ್ಯಕತೆ ಇದ್ದಲ್ಲಿ ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ಆರಂಭಿಸಬೇಕು. ಆಶಾ ಕಾರ್ಯಕರ್ತೆಯರು ಮಗು, ತಾಯಿಯ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿ ಸೂಕ್ತ ಸಮಯಕ್ಕೆ ವೈದ್ಯರು ಇಲ್ಲದಿರುವುದು, ಚಿಕಿತ್ಸೆ ಸಿಗದಿರುವುದು, ಮಾಹಿತಿ-ಅನುಭವದ ಕೊರತೆ, ನಿರ್ಲಕ್ಷ್ಯದಿಂದ ಈ ರೀತಿ ಮಕ್ಕಳ-ಗರ್ಭಿಣಿಯರ ಸಾವು ಸಂಭವಿಸುತ್ತದೆ. ಹೀಗೆ ಮುಂದುವರಿದರೆ ಘಟನೆಗೆ ಕಾರಣರಾಗುವ ಎಲ್ಲರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಹೇಮಾವತಿ, ತಾಲೂಕು ಆರೋಗ್ಯಾಧಿಕಾರಿಗಳು, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

15ಕೆಡಿಬಿಪಿ7-

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ
ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ