ಹಳ್ಳಾಡಿಯವರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Feb 17, 2026, 02:45 AM IST
ಖ್ಯಾತ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ಪುಂಡಲಿಕ ಹಾಲಂಬಿ ಪ್ರಶಸ್ತಿ ಪ್ರದಾನ ಮಾಡಲಾಯಿತು  | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಂದಾಪುರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಪತ್ನಿ ಜಿ. ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ಪ್ರಶಸ್ತಿಯನ್ನು ಖ್ಯಾತ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಂದಾಪುರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಪತ್ನಿ ಜಿ. ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ಪ್ರಶಸ್ತಿಯನ್ನು ಖ್ಯಾತ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.ಪ್ರಶಸ್ತಿಯನ್ನು ಪ್ರದಾನ ಮಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು, ಹಳ್ಳಾಡಿ ಜಯರಾಮ ಶೆಟ್ಟಿ ಅವರಂತಹ ಹಿರಿಯ ಕಲಾವಿದರು, ತಮ್ಮ ಕಲಾಪ್ರತಿಭೆಯಿಂದಲೇ ಬೆಳೆದು ಬಂದವರು. ಅವರಿಗೆ ಕಲೆಯೇ ಉಸಿರು. ಅವರಂತಹ ಹಿರಿಯ ಯಕ್ಷಗಾನ ಸಾಧಕರನ್ನು ಗುರುತಿಸಿ ಪುಂಡಲೀಕ ಹಾಲಂಬಿ ಪ್ರಶಸ್ತಿ ನೀಡಿರುವುದು ನೈಜ ಸಾಧಕನಿಗೆ ಸಂದ ಗೌರವವಾಗಿದೆ ಎಂದು ಹೇಳಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಹಾಲಂಬಿಯವರು ಸಾಹಿತ್ಯ ಪರಿಷತ್‌ಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಹಳ್ಳಾಡಿ ಜಯರಾಮ ಶೆಟ್ಟರು ಉತ್ತಮ ಹಾಸ್ಯ ಕಲಾವಿದ. ಅವರಿಗೆ ಈ ಪ್ರಶಸ್ತಿ ನೀಡುವ ಮೂಲಕ ಅದರ ಮೌಲ್ಯ ಇನ್ನಷ್ಟು ಹೆಚ್ಚಾಗಿದೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ದತ್ತಿನಿಧಿ ದಾನಿ ಜಿ. ಸರೋಜಮ್ಮ ಪುಂಡಲೀಕ ಹಾಲಂಬಿ, ಸಾಂಸ್ಕೃತಿಕ ಚಿಂತಕ ಕೆ. ಸೀತಾರಾಮ ನಕ್ಕತ್ತಾಯ, ಕುಂದಾಪುರ ಸರಕಾರಿ ಪ್ರ.ಪೂ. ಕಾಲೇಜಿನ ಪ್ರಾಂಶುಪಾಲ ಜಿ. ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಕಸಾಪ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್ ಅಭಿನಂದನಾ ನುಡಿಗಳನ್ನಾಡಿದರು. ಕಸಾಪ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಆಶಯ ನುಡಿಗಳನ್ನಾಡಿದರು. ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪ್ರಸ್ತಾವಿಸಿ, ಕಾರ್ಕಳ ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಪರಿಚಯಿಸಿದರು. ಮನೋಹರ ಪಿ. ಸ್ವಾಗತಿಸಿ, ಮಂಜುನಾಥ ಕೆ.ಎಸ್. ವಂದಿಸಿದರು. ದಿನಕರ ಆರ್. ಶೆಟ್ಟಿ ನಿರೂಪಿಸಿದರು.40 ಪೈಸೆಯಿಂದ 25 ಸಾವಿರ ರು.ವರೆಗೆ: ಪ್ರಶಸ್ತಿ ಸ್ವೀಕರಿಸಿದ ಹಳ್ಳಾಡಿ ಜಯರಾಮ ಶೆಟ್ಟಿ ಮಾತನಾಡಿ, 50 ವರ್ಷಗಳ ಹಿಂದೆ 40 ಪೈಸೆಗೆ ಯಕ್ಷರಂಗದಲ್ಲಿ ದುಡಿಮೆ ಆರಂಭಿಸಿದ ನಾನು ಇಂದು ಈ ಪ್ರಶಸ್ತಿ ರೂಪದಲ್ಲಿ ಒಂದೇ ದಿನದಲ್ಲಿ 25 ಸಾವಿರ ರು. ಪಡೆಯುವ ಮಟ್ಟಿಗೆ ಬೆಳೆಯಲು ಕಾರಣ ಯಕ್ಷಗಾನ ಅಭಿಮಾನಿಗಳು. ಈ ಗೌರವ ಎಲ್ಲವೂ ಅವರಿಗೆ ಸಲ್ಲಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ
ಪೊಲೀಸ್‌ ಗೃಹ ಯೋಜನೆ 2030ರವರೆಗೆ ಮುಂದುವರಿಕೆ: ಪರಮೇಶ್ವರ್‌