ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ನೂತನ ರೈಲು ಸಂಪರ್ಕಕ್ಕಾಗಿ ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ಪ್ರಸ್ತಾಪಿತ ಮಾರ್ಗದಲ್ಲಿ ಈ ರೈಲು ಪ್ರಾರಂಭಿಸುವಂತೆ ಮನವಿ ಮಾಡಿದ್ದೆ. ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಈಗ ಅದು ಈಡೇರಿದೆ ಎಂದು ಹೇಳಿದರು.
ಬೆಳಗಾವಿ-ಪುಣೆ ನಗರಗಳ ನಡುವೆ ವಂದೇ ಭಾರತ್ ನೂತನ ರೈಲು ಸಂಚಾರಕ್ಕೆ ಸೆ.15ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದು, ಅಂದು ಸಂಜೆ ರೈಲನ್ನು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಲಾಗುವುದು ಎಂದು ಹೇಳಿದರು.ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲು ಕೂಡ ಬೆಳಗಾವಿ ನಗರದವರೆಗೂ ವಿಸ್ತರಿಸುವ ಬಗ್ಗೆಯೂ ಕೇಂದ್ರ ರೈಲ್ವೆ ಸಚಿವರೊಂದಿಗೆ ಚರ್ಚಿಸಿದ್ದೇನೆ. ಈ ಬೇಡಿಕೆಯನ್ನು ಸಹ ಅವರು ಪರಿಗಣಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.