ಮಳವಳ್ಳಿ: ಕಲೆ ಜೊತೆಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡು ಜನರ ಮನಸ್ಸಿನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಶಾಶ್ವತವಾಗಿ ಉಳಿದಿದ್ದಾರೆ ಎಂದು ಡಾ.ರಾಜ್‌ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ತಿಳಿಸಿದರು.
ಪುನೀತ್ ರಾಜ್‌ಕುಮಾರ್ ಅವರ ಚಲನಚಿತ್ರಗಳು ತನ್ನದೇ ಆದ ಛಾಪು ಮೂಡಿಸಿದ್ದು, ಕಲೆ ಜೊತೆಗೆ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮತ್ತು ಹಲವಾರು ಗೋಶಾಲೆಗಳಿಗೆ ಕಾಣದಂತೆ ಸಹಾಯದಲ್ಲಿ ತೊಡಗಿದ್ದರು. ಆದರ್ಶ ಪುರುಷ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್ಯಾದ್ಯಂತ ಸಂಭ್ರಮದಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದರು.
ಇದೇ ವೇಳೆ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಲಾಯಿತು. ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳು ಹಾಗೂ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖಂಡರಾದ ಟಿ.ಸಿ.ಪ್ರಕಾಶ್, ಸಿದ್ದರಾಜು, ಟಿ.ಡಿ.ನಾಗರಾಜು, ಅಂಗಡಿಸಿದ್ದು, ಜವರಾಯ, ಶಿವಕುಮಾರ್, ಸಿದ್ದ, ಮಹದೇವು, ನಾಗಣ್ಣ, ಕರಿಯಪ್ಪ, ಹುಚ್ಚಯ್ಯ ಸೇರಿದಂತೆ ಇತರರು ಇದ್ದರು.