ಪುನೀತ್ ರಾಜ್ ಕುಮಾರ್ 3ನೇ ವರ್ಷದ ಪುಣ್ಯಸ್ಮರಣೆ

KannadaprabhaNewsNetwork |  
Published : Nov 01, 2024, 12:00 AM IST
31ಕೆಎಂಎನ್ ಡಿ17 | Kannada Prabha

ಸಾರಾಂಶ

ಬಾಲ ನಟನಾಗಿ ಸಿನಿಮಾ ರಂಗ ಪ್ರವೇಶಿಸಿದ ಡಾ. ಪುನೀತ್ ರಾಜ್‌ಕುಮಾರ್ ಅವರು ತಮ್ಮ ನಟನೆ ಮೂಲಕ ಪ್ರೇಕ್ಷಕರನ್ನು ರಂಜಿಸುವ ಜತೆಗೆ ತಮ್ಮ ಮಾನವೀಯ ಗುಣಗಳಿಂದ ಅಪಾರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ .

ಪಾಂಡವಪುರ: ತಾಲೂಕಿನ ಅರಳಕುಪ್ಪೆ ಬೆಳದಿಂಗಳ ಬಳಗ ಮತ್ತು ಫ್ರೆಂಡ್ಸ್ ಗ್ರೂಪ್ಸ್ ವತಿಯಿಂದ ಗ್ರಾಮ ಪಂಚಾಯ್ತಿ ಕಚೇರಿ ಮುಂಭಾಗ ನಟ ದಿ.ಡಾ.ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ 3ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಬಳಗದ ಅಧ್ಯಕ್ಷ ಎ.ಆರ್.ಹರೀಶ್ ಮಾತನಾಡಿ, ಬಾಲ ನಟನಾಗಿ ಸಿನಿಮಾ ರಂಗ ಪ್ರವೇಶಿಸಿದ ಡಾ. ಪುನೀತ್ ರಾಜ್‌ಕುಮಾರ್ ಅವರು ತಮ್ಮ ನಟನೆ ಮೂಲಕ ಪ್ರೇಕ್ಷಕರನ್ನು ರಂಜಿಸುವ ಜತೆಗೆ ತಮ್ಮ ಮಾನವೀಯ ಗುಣಗಳಿಂದ ಅಪಾರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ ಎಂದರು. ಅಲ್ಪ ಅವಧಿಯಲ್ಲಿ ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ತಂದೆ ಹಾದಿಯಲ್ಲಿ ನಡೆದು ಬಂದು ಕನ್ನಡಿರ ಮನಸ್ಸಿನಲ್ಲಿ ನೆಲೆಸಿರುವ ಅವರ ನಿಸ್ವಾರ್ಥ ಸೇವೆಗೆ ಎಂದೂ ಬೆಲೆ ಕಟ್ಟಲಾಗದು ಎಂದು ಹೇಳಿದರು. ಬಳಗದ ಸಂಚಾಲಕ ಸಚಿನ್, ಸದಸ್ಯರಾದ ಜಯರಾಮು, ಅರುಣೇಶ, ಸಿದ್ದೇಗೌಡ, ಪ್ರವೀಣ್, ರಾಕೇಶ್, ಪಾಪಣ್ಣ, ಗಿರೀಶ್, ಲೋಚನ್, ಕಿರಣ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ