ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಅಂದು ಸಂಜೆ 5.30 ಕ್ಕೆ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ. ಓಂಕಾರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಶಾಸಕ ಎಚ್.ಡಿ. ತಮ್ಮಯ್ಯ ಕನ್ನಡ ಧ್ವಜ ಅರೋಹಣ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಚಿತ್ರಕಲಾ ಪರಿಷತ್ನ ಅಧ್ಯಕ್ಷ ಡಾ.ಬಿ.ಎಲ್. ಶಂಕರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪುನೀತ್ ರಾಜ್‌ಕುಮಾರ್ ರವರಿಗೆ ನುಡಿ ನಮನ ಸಲ್ಲಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಡಾ. ರಾಜ್‌ಕುಮಾರ್ ಅವರ ಭಾವಚಿತ್ರ ಅನಾವರಣಗೊಳಿಸಿದ್ದಾರೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಂಸದ ಖೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ತಾಲೂಕು ಮಟ್ಟದ ಕ್ರೀಡಾಕೂಟ: ಜಿಲ್ಲಾಡಳಿತ, ಜಿಪಂ, ತಾಪಂ, ನಗರಸಭೆ ಚಿಕ್ಕಮಗಳೂರು, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಮಗಳೂರಿನ ವಿದ್ಯಾಭಾರತಿ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಸೆ. 20 ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಚಿಕ್ಕಮಗಳೂರು ತಾಲೂಕು ಮಟ್ಟದ 17 ವರ್ಷ ವಯೋಮಾನ ದೊಳಗಿನ ಮಕ್ಕಳ 2025-26 ನೇ ಸಾಲಿನ ಕ್ರೀಡಾಕೂಟ ನಡೆಯಲಿದೆ ಎಂದು ಅಫ್ಸರ್ ಹೇಳಿದರು.
ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ 2002 ರಲ್ಲಿ ಸ್ಥಾಪನೆಗೊಂಡ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ಗಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಸತತವಾಗಿ ಮೂರು ವರ್ಷಗಳ ಕಾಲ ಎಸ್ಎಸ್ಎಲ್‌ಸಿಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ಸೆ. 8 ರಂದು ನಡೆದ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಪ್ರಶಂಸಿದೆ ಎಂದು ಹೇಳಿದರು.ಪ್ರಶಸ್ತಿ ಪ್ರದಾನ
ಸುದ್ಧಿಗೋಷ್ಠಿಯಲ್ಲಿ ವಿದ್ಯಾಭಾರತಿ ಆಂಗ್ಲ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಾಹಿರಾ ಫಾತಿಮಾ, ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ಪ್ರಧಾನ ವ್ಯವಸ್ಥಾಪಕ ಎಂ.ಆರ್. ಸೋಮಶೇಖರ್, ಹಣಕಾಸು ವಿಭಾಗದ ಮುಖ್ಯಸ್ಥ ಸಿ.ಆರ್. ಮಂಜುನಾಥ್ ಉಪಸ್ಥಿತರಿದ್ದರು. 18 ಕೆಸಿಕೆಎಂ 1ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ. ಅಫ್ಸರ್ ಹಿಂದೂಸ್ತಾನಿ ಅವರು ಮಾತನಾಡಿದರು. ಸಾಹಿರಾ ಫಾತಿಮಾ, ಎಂ.ಆರ್. ಸೋಮಶೇಖರ್, ಸಿ.ಆರ್. ಮಂಜುನಾಥ್ ಇದ್ದರು.