ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ರೋಟರಿ ಸಂಸ್ಥೆ, ಹೊಸಕೆರೆ ಗ್ರಾಮಾಭಿವೃದ್ಧಿ ಸಂಘ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಚಿತ್ರರಂಗದಲ್ಲಿ ಅತ್ಯುತ್ತಮ ಹೆಸರು ಗಳಿಸುವ ಜತೆಗೆ ಬಡ ಜನರಿಗೆ ಹಲವು ಸೇವಾ ಕಾರ್ಯಗಳನ್ನು ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ ಎಂದರು.ಅತಿ ಚಿಕ್ಕ ವಯಸ್ಸಿನಲ್ಲೇ ಪುನೀತ್ ರಾಜ್‌ಕುಮಾರ್ ತಮ್ಮನ್ನು ಬಿಟ್ಟು ಅಗಲಿರುವುದು ನೋವಿನ ಸಂಗತಿ. ಅಪ್ಪು ಅವರ ಸಮಾಜಮುಖಿ ಸೇವಾ ಕಾರ್ಯಗಳು ಜನಮಾಸದಲ್ಲಿ ಅಚ್ಚಳಿಯದೆ ಉಳಿಯಲಿದ್ದು, ಅವರ ಹುಟ್ಟುಹಬ್ಬದ ಅಂಗವಾಗಿ ರಾಜ್ಯಾದ್ಯಂತ ಅಭಿಮಾನಿಗಳು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ಥಕತೆ ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 70ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಈ ವೇಳೆ ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಮಿಲಿಟರಿ ಕುಮಾರ್, ರವಿ, ನಿವೃತ್ತ ಪ್ರಾಂಶುಪಾಲ ಪ್ರೊ.ಕಾಳಯ್ಯ, ಶಿವಕುಮಾರ್, ಇಂದುಕುಮಾರ್, ತಿಪ್ಪೂರ್ ರಾಜೇಶ್, ಕೃಷ್ಣಪ್ಪ, ಬಸವರಾಜು, ಪ್ರಭಾಕರ್, ಮಹೇಶ್, ಮಧುಸೂದನ್ ಇತರರಿದ್ದರು.