ಪುನೀತ್ ಅಭಿಮಾನಿಗಳಿಂದ ಲೊಕ್ಕನಹಳ್ಳಿಯಲ್ಲಿ ರಕ್ತದಾನ ಶಿಬಿರ
ಸಿನಿಮಾ ನಟನ ಸಮಾಜ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಸಾದ್ ತಿಳಿಸಿದರು.
ತಾಲೂಕಿನ ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ಹಾಗೂ ಡಾ. ಪುನೀತ್ ರಾಜಕುಮಾರ್‌ರವರ ಅಭಿಮಾನಿ ಬಳಗ ಲೊಕ್ಕನಹಳ್ಳಿ ಇವರ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಕಾರಣ ಅವರಲ್ಲಿರುವಂತಹ ತಪ್ಪು ತಿಳಿವಳಿಕೆ. ರಕ್ತದಾನ ಮಾಡುವುದರಿಂದ ಅನೇಕ ಲಾಭಗಳನ್ನು, ಪ್ರಯೋಜನಗಳನ್ನು ಪಡೆಯದಿದ್ದು, ಯಾವುದೇ ತಪ್ಪು ವದಂತಿಗಳಿಗೆ ಕಿವಿಗೊಡದೆ ಆರೋಗ್ಯವಂತ ಯುವಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರ ಜೀವಕ್ಕೆ ಸಹಾಯ ಮಾಡುವುದರಿಂದ ತುಂಬಾ ಅನುಕೂಲವಾಗಲಿದೆ. ನೆಚ್ಚಿನ ನಟನನ್ನು ಮನದಲ್ಲಿ ನೆನೆದು ಅವರ ಸಮಾಜಮುಖಿ ಕಾರ್ಯದಂತೆ ನಾವು ಕೂಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಉತ್ಸಾಹದಿಂದ ಲೊಕ್ಕನಹಳ್ಳಿ ಗ್ರಾಮದ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದರು.
ನಟ ನಟಿಯರ ಪ್ರೇರಣೆಯಿಂದ ಅನೇಕ ಒಳ್ಳೆಯ ಕೆಲಸ ಮಾಡುತ್ತಿದ್ದೂ, ಅದರಂತೆ ಲೊಕ್ಕನಹಳ್ಳಿ ಗ್ರಾಮದಲ್ಲಿ ಯುವಕರು ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದೂ, ಮತ್ತಷ್ಟು ಸಮಾಜ ಮುಖಿ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಇದೇ ವೇಳೆ ಸುಮಾರು 15ಕ್ಕೂ ಹೆಚ್ಚು ಯುವಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.ಈ ಶಿಬಿರದಲ್ಲಿ ಅಪ್ಪು ಅಭಿಮಾನಿ ಬಳಗದ ಎಲ್ಲಾ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಹೋಲಿ ಕ್ರಾಸ್ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
---17ಸಿಎಚ್‌ಎನ್60
ಹನೂರು ತಾಲೂಕಿನ ಲೊಕ್ಕನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೋಲಿ ಕ್ರಾಸ್ ಆಸ್ಪತ್ರೆ ಹಾಗೂ ಡಾ. ಪುನೀತ್ ರಾಜಕುಮಾರ್ ರವರ ಅಭಿಮಾನಿ ಬಳಗ ಲೊಕ್ಕನಹಳ್ಳಿ ಇವರ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.