ಪುರಾಣ ನೈತಿಕ, ಧಾರ್ಮಿಕ ಮೌಲ್ಯಗಳ ವಾಹಕ: ಪ್ರೊ. ಎಂ. ಪ್ರಭಾಕರ ಜೋಶಿ

KannadaprabhaNewsNetwork |  
Published : Jul 17, 2024, 12:47 AM IST
ಪುರಾಣ | Kannada Prabha

ಸಾರಾಂಶ

ಧರ್ಮಸ್ಥಳದಲ್ಲಿ ಜು.೧೬ ರಿಂದ ಆ.೧೭ರ ವರೆಗೆ ಪ್ರತಿ ದಿನ ಸಂಜೆ ೬.೩೦ರಿಂದ ೮ರ ವರೆಗೆ ನಡೆಯಲಿರುವ ೫೩ನೇ ವರ್ಷದ ‘ಜೈಮಿನಿ ಭಾರತ’ ಮತ್ತು ‘ತುರಂಗ ಭಾರತ’ ಪುರಾಣ ಕಾವ್ಯ ವಾಚನ - ಪ್ರವಚನ ಕಾರ್ಯಕ್ರಮ ಉದ್ಘಾಟನೆಗೊಂಡಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿವೆ. ಪುರಾಣ ವಾಚನ - ಪ್ರವಚನದಿಂದ ಪ್ರತಿ ಕಲೆಯೂ, ಕಲಾವಿದರೂ ಬೆಳೆಯಬೇಕು ಎಂದು ಹಿರಿಯ ವಿದ್ವಾಂಸ ಪ್ರೊ. ಎಂ. ಪ್ರಭಾಕರ ಜೋಶಿ ಹೇಳಿದರು.ಅವರು ಮಂಗಳವಾರ ಧರ್ಮಸ್ಥಳದಲ್ಲಿ ಜು.೧೬ ರಿಂದ ಆ.೧೭ರ ವರೆಗೆ ಪ್ರತಿ ದಿನ ಸಂಜೆ ೬.೩೦ರಿಂದ ೮ರ ವರೆಗೆ ನಡೆಯಲಿರುವ ೫೩ನೇ ವರ್ಷದ ‘ಜೈಮಿನಿ ಭಾರತ’ ಮತ್ತು ‘ತುರಂಗ ಭಾರತ’ ಪುರಾಣ ಕಾವ್ಯ ವಾಚನ - ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇವರ ಕಲ್ಪನೆಯನ್ನು ಜನಮನಕ್ಕೆ ತಲುಪಿಸುವುದೇ ಪುರಾಣಗಳ ಉದ್ದೇಶವಾಗಿದೆ. ವಿಷ್ಣುಪುರಾಣ, ಭಾಗವತ, ರಾಮಾಯಣ, ಮಹಾಭಾರತ ಮೊದಲಾದ ಅನೇಕ ಪುರಾಣಗಳಿವೆ. ರಾಮಾಯಣದಲ್ಲಿಯೂ ಬೇರೆ ಬೇರೆ ಭಾಷೆಗಳಲ್ಲಿ ಹಲವು ರೀತಿಯ ರಾಮಾಯಣಗಳು ರಚನೆಯಾಗಿವೆ. ನಮ್ಮ ಸನಾತನ ಧಾರ್ಮಿಕ ಪರಂಪರೆಯನ್ನು ವಿಸ್ತರಿಸಿ ಸೃಜನಶೀಲತೆಯೊಂದಿಗೆ ಜನರಿಗೆ ತಲುಪಿಸುವ ಕಾಯಕವನ್ನು ಪುರಾಣಗಳು ಮಾಡುತ್ತವೆ. ಪುರಾಣಗಳಲ್ಲಿ ಜ್ಞಾನ, ವಿಜ್ಞಾನ, ಸಾಹಿತ್ಯ, ಕಲೆ, ಸಂಗೀತ, ಮಾನವೀಯ ಮೌಲ್ಯಗಳು ಎಲ್ಲವೂ ಅಡಕವಾಗಿವೆ ಎಂದು ಹೇಳಿದರು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿ, ಪುರಾಣ ವಾಚನ - ಪ್ರವಚನದಿಂದ ಸಮಯದ ಸದುಪಯೋಗದೊಂದಿಗೆ ವಿಶಿಷ್ಟ ಮಾಹಿತಿ, ಮಾರ್ಗದರ್ಶನ ದೊರಕುತ್ತದೆ. ನಮ್ಮ ಜ್ಞಾನ ಕ್ಷಿತಿಜ ವಿಸ್ತರಣೆಯಾಗುತ್ತದೆ. ಪ್ರಸ್ತುತ ಜನರಲ್ಲಿ ಮಾತನಾಡುವ ಚಟ ಹೆಚ್ಚಾಗಿದೆ. ಕೇಳುವ ವ್ಯವಧಾನ ಯಾರಲ್ಲೂ ಇರುವುದಿಲ್ಲ. ಎಲ್ಲರೂ ಉತ್ತಮ ಶ್ರೋತೃಗಳಾಗಿ ಜೀವನಶೈಲಿ ಸುಧಾರಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಹೇಮಾವತಿ ವಿ. ಹೆಗ್ಗಡೆಯವರು ಉಪಸ್ಥಿತರಿದ್ದರು.ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌