ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಖರೀದಿ

KannadaprabhaNewsNetwork |  
Published : Nov 13, 2024, 12:00 AM ISTUpdated : Nov 13, 2024, 12:01 AM IST
೧೨ಕೆಎಲ್‌ಆರ್-೪ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ನೊಂದಣಿ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಅಕ್ರಂಪಾಷ ಸಭೆ ನಡೆಸಿದರು. | Kannada Prabha

ಸಾರಾಂಶ

ರೈತರ ಫ್ರೂಟ್ಸ್ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಶೀಲಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕೋಲಾರಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಭತ್ತ, ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿ.೦೧ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದ್ದಾರೆ.ರೈತರ ನೊಂದಣಿ ಪ್ರಕ್ರಿಯೆಯು ರಾಗಿ ಮತ್ತು ಜೋಳ ಮತ್ತು ಭತ್ತ ಬೆಳೆಗಳಿಗೆ ಡಿ.೦೧ರಿಂದ ನಡೆಯಲಿದ್ದು, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆಯು ೨೦೨೫ನೇ ಜನವರಿ ೧ರಿಂದ ೨೦೨೫ನೇ ಮಾರ್ಚ್ ೩೧ರವರೆಗೆ ನಡೆಯಲಿದೆ.ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ (ಪ್ರತಿ ಕ್ವಿಂಟಲ್‌ಗೆ) ರೂ.೨೩೦೦, ಗ್ರೇಡ್ ಎ-ಭತ್ತಕ್ಕೆ ರೂ.೨೩೨೦, ರಾಗಿಗೆ ರೂ.೪೨೯೦, ಹೈಬ್ರೀಡ್-ಬಿಳಿ ಜೋಳಕ್ಕೆ ರೂ.೩೩೭೧, ಮಾಲ್ದಂಡಿ-ಬಿಳಿ ಜೋಳಕ್ಕೆ ರೂ.೩೪೨೧ ಕನಿಷ್ಠ ಬೆಂಬಲ ಬೆಲೆಗಳಾಗಿವೆ ಎಂದರು.ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ ಮಾರಾಟ ಮಾಡಲು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.ರೈತರ ಫ್ರೂಟ್ಸ್ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್ ಐ.ಡಿ ಮಾಹಿತಿ ಪರಿಶೀಲಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು.

ಹಣಪಾವತಿ:

ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಕೃಷಿ ಜಂಟಿ ನಿರ್ದೇಶಕಿ ಸುಮಾ ಇದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌