ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಹೊರವಲಯದಲ್ಲಿರುವ ಶೀಬಾರದ ಶ್ರೀ ಗುರುಪಾದ ಮುರುಘರಾಜೇಂದ್ರ ಶ್ರೀಗಳವರ ವನದಲ್ಲಿ ಭಾನುವಾರ ನಡೆದ ಶ್ರಮದಾನ, ಶಿವಯೋಗ ಪ್ರಾತ್ಯಕ್ಷಿಕೆ, ಗಾನ ನಮನ, ನುಡಿ ನಮನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸೇರಿದಂತೆ ಅಪರೂಪದ ಕಾರ್ಯಕ್ರಮಗಳ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಬಸವಾದಿ ಶಿವಶರಣರ ವಚನಗಳು ಮಾನವನನ್ನು ಮಹದೇವನನ್ನಾಗಿಸುವ ಮೌಲ್ಯಗಳನ್ನು ಒಳಗೊಂಡಿವೆ. ಇಷ್ಟಲಿಂಗದ ಮೂಲಕ ಮನಸ್ಸನ್ನು ಏಕಾಗ್ರಗೊಳಿಸುತ್ತವೆ ಎಂದರು.ಖ್ಯಾತ ಗಾಯಕಿ ಡಾ.ಎಸ್.ಜಾನಕಿ ಅವರಿಗೆ ಗಾನ ನಮನ ಸಲ್ಲಿಸಲಾಯಿತು. ಹಿರಿಯ ಗಾಂಧಿವಾದಿ ಎಚ್.ಹನುಮಂತಪ್ಪ ಅವರ ಸಮಾಜಮುಖಿ ಸೇವೆಯನ್ನು ಸ್ಮರಿಸಿ ನುಡಿ ನಮನ ಅರ್ಪಿಸಲಾಯಿತು. ಇದೇ ವೇಳೆ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಕೆ.ಪಿ. ಓಂಕಾರಮೂರ್ತಿ ಸೇರಿದಂತೆ ಶಿಕ್ಷಣ, ಸಮಾಜಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ.ಗುಡಸಿ, ಗಾಯತ್ರಿ ಶಿವರಾಂ, ನಾಗರಾಜ ಸಂಗಂ, ಕವಿ ಗಂಗಾಧರಪ್ಪ, ಮಲ್ಲಿಕಾರ್ಜುನಪ್ಪ, ಗೌಳಿರುದ್ರಪ್ಪ, ವಕೀಲರಾದ ಉಮೇಶ್, ಗುತ್ತಿನಾಡು ಪ್ರಕಾಶ್, ವರ್ತಕ ತಿಪ್ಪೇಸ್ವಾಮಿ, ಕಣಿವೆಮಾರಮ್ಮ ತಿಪ್ಪೇಸ್ವಾಮಿ, ಆಯುಷ್ ಯೋಗ ಸಂಸ್ಥೆಯ ಪ್ರಸನ್ನಕುಮಾರ್, ಮಂಜುನಾಥ್, ಬಸವರಾಜ್, ಶಿವಯೋಗಿ, ಸೇರಿದಂತೆ ವಿವಿಧ ಮಠಾಧೀಶರು ಕಲಾವಿದರು, ಕಲಾಭಿಮಾನಿಗಳು, ಭಕ್ತರು, ಸಾರ್ವಜನಿಕರು, ಎಸ್.ಜೆ.ಎಂ. ವಿದ್ಯಾಪೀಠದ ಕೆಲ ಶಾಲಾಕಾಲೇಜುಗಳ ನೌಕರರು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಮಾಜ, ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.