ಭಟ್ಕಳ: ಮಾರುಕೇರಿಯ ಹೂತ್ಕಳದ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ದೇವಿಮನೆಯ ಶಿವಶಾಂತಿಕಾ (ದುರ್ಗಾ) ಪರಮೇಶ್ವರಿ ದೇವಸ್ಥಾನಕ್ಕೆ ಮಹಾಶಿವರಾತ್ರಿ ಅಂಗವಾಗಿ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ 6ನೇ ವರ್ಷದ ಪಾದಯಾತ್ರೆ ನಡೆಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಧನ್ವಂತರಿ ವಿಷ್ಣುಮೂರ್ತಿ ಗಣಪತಿ ದೇವಸ್ಥಾನದಲ್ಲಿ ಅರ್ಚಕ ಶಂಕರ ಭಟ್ಟ ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಪಾದಯಾತ್ರೆ ಸಮಿತಿ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ಪ್ರಾಸ್ತಾವಿಕ ಮಾತನಾಡಿದರು. ಮಾರುಕೇರಿ ಗ್ರಾಪಂ ಅಧ್ಯಕ್ಷೆ ನಾಗವೇಣಿ ಗೊಂಡ, ಉಪಾಧ್ಯಕ್ಷ ಎಂ.ಡಿ. ನಾಯ್ಕ, ಸದಸ್ಯ ನಾರಾಯಣ ಗೊಂಡ, ಪಾದಯಾತ್ರೆ ಸಮಿತಿ ಪ್ರಮುಖರಾದ ಕೃಷ್ಣಮೂರ್ತಿ ಹೆಗಡೆ, ಮಾರುಕೇರಿ ಎಸ್‌ಪಿ ಹೈಸ್ಕೂಲ್ ಮುಖ್ಯಶಿಕ್ಷಕ ಪಿ.ಟಿ. ಚವ್ಹಾಣ, ಸೋಮಶೇಖರ ನಾಯ್ಕ, ರವಿ ನಾಯ್ಕ, ನಾಗೇಶ ದೇವಡಿಗ, ಮಂಜುನಾಥ ಗೊಂಡ, ಚಂದ್ರಕಲಾ ನಾಯ್ಕ, ಗುರುದತ್ತ ದೇವಡಿಗ, ಗಣೇಶ ಗೊಂಡ, ಮಹೇಶ ಶೆಟ್ಟಿ ಮುಂತಾದವರಿದ್ದರು.ಪಾದಯಾತ್ರೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 120ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಕೋಕ್ತಿಯ ನಾಗರಾಜ ಭಟ್ಟ ಅವರ ತಂಡದ ಚಂಡೆ ವಾದನ ಪಾದಯಾತ್ರೆಗೆ ಮೆರುಗು ನೀಡಿತು. ದೇವಸ್ಥಾನದ ಆಡಳಿತ ಮಂಡಳಿಯಿಂದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಭಕ್ತರಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.