ಮನುಷ್ಯನ ಮನಸ್ಸನ್ನು ಶುದ್ಧೀಕರಿಸಿಕೊಳ್ಳುವುದು ಮುಖ್ಯ

KannadaprabhaNewsNetwork |  
Published : Aug 27, 2026, 01:30 AM IST
೨೬ಶಿರಾ೨: ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳುವರಹಳ್ಳಿ ಗ್ರಾಮದಲ್ಲಿ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಯನ್ನು ಶ್ರೀ ಹನುಮಂತನಾಥ ಸ್ವಾಮೀಜಿ ನೆರವೇರಿಸಿದರು. | Kannada Prabha

ಸಾರಾಂಶ

ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ನುಡಿದರು.

ಕನ್ನಡಪ್ರಭ ವಾರ್ತೆ ಶಿರಾ

ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ನುಡಿದರು.

ಅವರು ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳುವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ. ಕಳುವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಶಿರಾ ತಾಲೂಕಿನಲ್ಲಿ ಇನ್ನು ಮುಂದೆಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, ೧೨ ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂತ್ರಿ ಪಟ್ಟಕ್ಕಾಗಿ ರೈತರಿಗೆ ಮಧು, ಎಸ್ಸೆಸ್ಸೆಂ ಅನ್ಯಾಯ
ಗುಟ್ಕಾ, ಪಾನ್ ಮಸಾಲ ನಿಷೇಧ ವಿರೋಧಿಸಿ ಹೋರಾಟ ಶುರು