ಕನ್ನಡಪ್ರಭ ವಾರ್ತೆ, ಭದ್ರಾವತಿ
ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದಿಂದ ಬುಧವಾರ ಬಸವ ಸಭಾಭವನದಲ್ಲಿ ಅಂಬೇಡ್ಕರ್ 67ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವ ಕುರಿತು ಮಾತನಾಡಿದರು.
ಸಾವಿರಾರು ಸಂಕಟಗಳು ಬಂದರೂ ಸಹನೆ ಮೀರದೇ, ಸಾಧನೆ ಹಾದಿಯಲ್ಲಿ ಸಾಗಿದರು. ಅವರು ಭಾರತೀಯ ಸಾಮಾಜಿಕ ಅಸಮಾನತೆಯ ನಡುವೆಯೂ ಬೆಳೆದ ರೀತಿ ವಿಸ್ಮಯ. ಭಾರತೀಯ ಸಾಮಾಜಿಕ ವ್ಯವಸ್ಥೆಯ ನಾಡಿಮಿಡಿತವನ್ನು ಅರಿತು, ಮಾನವೀಯತೆಯ ಔಷಧಿಯನ್ನು ನೀಡಿದ ಸಾಮಾಜಿಕ ವೈದ್ಯರಿವರು. ಅಂಬೇಡ್ಕರ್ ಅವರದು ಛಲದ ವ್ಯಕ್ತಿತ್ವ ಎಂದರು.ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪರೀಕ್ಷಾಂಗ ಕುಲಸಚಿವ ಡಾ. ಎಸ್.ಎಂ. ಗೋಪಿನಾಥ್, ನನ್ನ ಮಕ್ಕಳ ಶಾಲಾ ದಾಖಲೆಯಲ್ಲಿ ಜಾತಿಯ ಹೆಸರನ್ನೇ ಸೇರಿಸಿಲ್ಲ. ಅಂಬೇಡ್ಕರ್ ಅವರ ಆಶಯದಂತೆ ಜಾತ್ಯತೀತವಾಗಿ ಬಾಳಬೇಕು. ಮನುಕುಲದ ಉದ್ದಾರಕ್ಕೆ ನಮ್ಮದೇ ಆದ ಅನನ್ಯ ಸೇವೆಯನ್ನು ಮಾಡಬೇಕು. ಅಂಬೇಡ್ಕರ್ ಅವರದು ಆದರ್ಶ ಮತ್ತು ಅನುಪಮವಾದ ವ್ಯಕ್ತಿತ್ವ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಪುರುಷೋತ್ತಮ ಎಸ್.ವಿ. ಪ್ರಾರ್ಥಿಸಿ, ಡಾ.ನವೀನ ಮಂಡಗದ್ದೆ ನಿರೂಪಿಸಿದರು. ನುಡಿಗಳನ್ನಾಡಿ, ಡಾ.ರವಿನಾಯ್ಕ ವಂದಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಕುಲಪತಿ ಪ್ರೊ. ಎಸ್. ವೆಂಕಟೇಶ್ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.