ಫೆ.7ರಂದು ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ 27ನೇ ವರ್ಷದ ಶಾಲಾ ವೈಭವ: ಪಿ.ಕಸ್ತೂರಿ ಅನಂತೇಗೌಡ

KannadaprabhaNewsNetwork |  
Published : Feb 05, 2025, 12:34 AM IST
4ಕೆಎಂಎನ್ ಡಿ26 | Kannada Prabha

ಸಾರಾಂಶ

ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆ 27ನೇ ವರ್ಷದ ಶಾಲಾ ವೈಭವ ಕಾರ್ಯಕ್ರಮ ಫೆ.7ರಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ ಎಂದು ವಿದ್ಯಾ ಸಂಸ್ಥೆ ಅಧ್ಯಕ್ಷೆ ಪಿ.ಕಸ್ತೂರಿ ಅನಂತೇಗೌಡ ಮಂಗಳವಾರ ಹೇಳಿದರು.

ಸಂಸ್ಥೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ಅಪರ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ತಹಸೀಲ್ದಾರ್ ಡಾ. ಸ್ಮಿತಾರಾಮು, ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ನಿವೃತ್ತ ಪ್ರಾಂಶುಪಾಲ ಡಾ.ಬಿ.ಕೃಷ್ಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಚ್.ಕಾಳಿರಯ್ಯ, ಬಿ.ಎನ್.ಮರಿಗೌಡ ಅವರುಗಳಿಗೆ ಅಭಿನಂದಿಸಲಾಗುವುದು. ಕಾರ್ಯಕ್ರಮದಲ್ಲಿ ಚಲನಚಿತ್ರ ಕಲಾವಿದರು, ವಿವಿಧ ಶಾಲಾ ಕಾಲೇಜುಗಳ ಉಪನ್ಯಾಸಕರು ಮತ್ತು ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಅನಂತೇಗೌಡ ಇದ್ದರು.

ರೈತ ಉತ್ಪಾದಕರ ಕಂಪನಿಗೆ ಪುಟ್ಟಸ್ವಾಮಿ ಅಧ್ಯಕ್ಷರಾಗಿ ಆಯ್ಕೆ

ಮದ್ದೂರು: ತಾಲೂಕಿನ ನಂಬಿನಾಯಕನಹಳ್ಳಿಯ ವಿಶ್ವೇಶ್ವರಯ್ಯ ಕೊಪ್ಪ ರೈತ ಉತ್ಪಾದಕರ ಕಂಪನಿಗೆ ನೂತನ ಅಧ್ಯಕ್ಷರಾಗಿ ಎನ್.ಟಿ.ಪುಟ್ಟಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.

ಎಚ್.ಎನ್.ರಮೇಶ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಂಘದ ಕಚೇರಿಯಲ್ಲಿ ನಡೆದ ಸರ್ವ ನಿರ್ದೇಶಕರು ಸಭೆಯಲ್ಲಿ ಎನ್.ಟಿ.ಪುಟ್ಟಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಎನ್.ಟಿ.ಪುಟ್ಟಸ್ವಾಮಿ ಮಾತನಾಡಿ, ಕೊಪ್ಪ ರೈತ ಉತ್ಪಾದಕರ ಕಂಪನಿ ಸಮಗ್ರ ಅಭಿವೃದ್ಧಿಗೆ ಸಂಘದ ಎಲ್ಲಾ ನಿರ್ದೇಕರ ವಿಶ್ವಾಸ ಪಡೆದು ನಿರಂತರವಾಗಿ ಶ್ರಮಿಸುತ್ತೇನೆ. ಷೇರುದಾರಿಗೆ ಸರ್ಕಾರ ಹಾಗೂ ಸಂಘದಿಂದ ದೊರಕುವ ಸಲವತ್ತುಗಳನ್ನು ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದರು.

ಈ ವೇಳೆ ಸಂಘದ ಉಪಾಧ್ಯಕ್ಷ ಬಿ.ಸಿ.ದಿಲೀಪ್, ನಿರ್ದೇಶಕರಾದ ವರುಣ್, ಕರಿಯಪ್ಪ, ಟಿ.ಸಿ.ಮಂಜು, ನಾರಾಯಣಶೆಟ್ಟಿ, ಶಶಿಕಲಾ, ಶಿವಣ್ಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಜು, ಸಿಇಒ ಸಿಂಧು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ