ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಗೆ ಕಡಿವಾಣ ಹಾಕಿ: ಶಾಸಕ ವೇದವ್ಯಾಸ್‌ ಕಾಮತ್

KannadaprabhaNewsNetwork |  
Published : Aug 09, 2025, 12:03 AM IST

ಸಾರಾಂಶ

ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದ್ದಾರೆ.

ಮಂಗಳೂರು: ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದ್ದಾರೆ.

ಕ್ಷೇತ್ರದ ಬಗ್ಗೆ ಪೂರ್ವಾಗ್ರಹ ಪೀಡಿತ ಅಜೆಂಡಾಗಳನ್ನು ಹೊಂದಿರುವವರು ಅಪಪ್ರಚಾರ ನಡೆಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿ ಭಕ್ತರು ಸಹನೆ ಕಳೆದುಕೊಳ್ಳಲು ಕಾರಣವಾಗುತ್ತಿದೆ. ಇದು ಪದೇ ಪದೇ ಪುನರಾವರ್ತನೆಯಾಗಿ ಹಿಂದೂಗಳು ಎದ್ದು ನಿಂತರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದರು.ಈಗ ಧರ್ಮಸ್ಥಳ ಟಾರ್ಗೆಟ್‌:

ಈ ಹಿಂದೆ ಎಡಪಂಥೀಯರು ಹಾಗೂ ಹಿಂದೂ ವಿರೋಧಿ ಶಕ್ತಿಗಳೆಲ್ಲಾ ರಾಮಸೇತು, ತಿರುಪತಿ, ಕಾಶಿ, ಶಬರಿಮಲೆ, ಈಶಾ, ಅನಂತಪದ್ಮನಾಭ, ಸೇರಿದಂತೆ ಹಿಂದೂ ಶ್ರದ್ಧಾ ಕೇಂದ್ರಗಳ ವಿರುದ್ಧ ಷಡ್ಯಂತರ ರೂಪಿಸಿದ್ದು ಇದೀಗ ಧರ್ಮಸ್ಥಳ ಅವರ ಟಾರ್ಗೆಟ್ ಆಗಿದೆ. ಎಸ್ಐಟಿ ತನಿಖೆ ಯಾವ ಹಂತಕ್ಕೆ ಬೇಕಾದರೂ ಹೋಗಲಿ. ಅಂತಿಮವಾಗಿ ಸತ್ಯಾಂಶ ಹೊರ ಬಂದು ಶ್ರೀ ಕ್ಷೇತ್ರದಲ್ಲಿ ಯಾವುದೇ ಲೋಪವಾಗಿಲ್ಲ ಎಂಬುದು ಬಹಿರಂಗವಾದರೆ, ಕ್ಷೇತ್ರದ ತೇಜೋವಧೆ ಮಾಡಿ, ಭಕ್ತರ ನಂಬಿಕೆಗಳನ್ನು ಘಾಸಿಗೊಳಿಸಿದ ದುರುಳರಿಗೆ ಯಾವ ಶಿಕ್ಷೆ ಎಂಬುದನ್ನು ಸರ್ಕಾರ ತಿಳಿಸಬೇಕು. ಕೂಡಲೇ ಈ ಎಲ್ಲ ವಿಚಾರಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ ಭಕ್ತರು ಬೀದಿಗಿಳಿಯುವ ಮುನ್ನ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌