ಕನ್ನಡಪ್ರಭ ವಾರ್ತೆ ಮಂಡ್ಯ
ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಇತ್ತೀಚೆಗೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಅತ್ಯಂತ ನೋವಿನ ಸಂಗತಿ. ಕುಟುಂಬಸ್ಥರು ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ಕಿರುಕುಳವೇ ಆತ್ಮಹತ್ಯೆಗೆ ಕಾರಣವೆಂದು ದೂರಿದ್ದಾರೆ. ಈ ಆರೋಪಗಳ ಸತ್ಯಾಸತ್ಯತೆಯನ್ನು ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳದ ಪ್ರಕರಣಗಳ ಹಿನ್ನೆಲೆಯಲ್ಲಿ 2025ರಲ್ಲಿ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಸಾಲಗಾರರಿಗೆ ಕಿರುಕುಳ ನೀಡುವ ಘಟನೆ ತಡೆಯಬೇಕು, ನೋಂದಣಿಯಿಲ್ಲದೆ ಕಾರ್ಯನಿರ್ವಹಿಸುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬಲವಂತದ ಸಾಲ ವಸೂಲಾತಿ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.ಇದಕ್ಕಾಗಿ ರಾಜ್ಯದಲ್ಲಿ ‘ಕರ್ನಾಟಕ ಮೈಕ್ರೋ ಲೋನ್ ಮತ್ತು ಸ್ಮಾಲ್ ಲೋನ್ (ಬಲವಂತದ ಕ್ರಮಗಳ ತಡೆ) ಕಾಯ್ದೆ ಜಾರಿಗೊಳಿಸಿದ್ದು, ಆರ್ಥಿಕವಾಗಿ ದುರ್ಬಲ ವರ್ಗಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಸಂಘಗಳನ್ನು ಅತಿಯಾದ ಬಡ್ಡಿ, ಬಲವಂತದ ವಸೂಲಾತಿಯಿಂದ ರಕ್ಷಿಸುವುದು ಇದರ ಉದ್ದೇಶವಾಗಿದೆ ಎಂದಿದ್ದಾರೆ.