ನಿಖಿಲ್‌ನನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ: ಎಚ್ಡಿಕೆ

KannadaprabhaNewsNetwork |  
Published : Oct 26, 2024, 01:08 AM ISTUpdated : Oct 26, 2024, 01:09 AM IST

ಸಾರಾಂಶ

ಚನ್ನಪಟ್ಟಣ: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿಯನ್ನ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ ಮಾಡಿದರು.

ಚನ್ನಪಟ್ಟಣ: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನಗೆ ಅಮೃತ ಕೊಟ್ಟಿರುವವರು ನೀವು. ಇದೀಗ ನಿಖಿಲ್ ಕುಮಾರಸ್ವಾಮಿಯನ್ನ ನಿಮ್ಮ ಮಡಿಲಿಗೆ ಹಾಕಿದ್ದೇನೆ. ಅವರನ್ನು ಆಶೀರ್ವದಿಸಿ ಗೆಲ್ಲಿಸಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮನವಿ ಮಾಡಿದರು.

ಚನ್ನಪಟ್ಟಣದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ನಮ್ಮಿಂದ ಅನ್ಯಾಯ ಆಗಿದ್ರೆ ಶಿಕ್ಷೆ ಕೊಡಿ. ಎಲ್ಲವನ್ನೂ ನಿಮ್ಮ ತೀರ್ಮಾನಕ್ಕೆ ಬಿಡ್ತೀನಿ. ಮಂಡ್ಯದಲ್ಲಿ ಕುತಂತ್ರ ಮಾಡಿ ಸೋಲಿಸಿದರು. ರಾಮನಗರದಲ್ಲೂ ಬಂದು ಬಿಲ ತೋಡಿ ಸೋಲಿಸಿದರು. ಈಗ ಇಲ್ಲಿಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೆಲಸ ಮಾಡಲು ಬಿಡಲಿಲ್ಲ: ನಾನು ಮುಖ್ಯಮಂತ್ರಿಯಾಗಿ ೧೪ ತಿಂಗಳು ರಾಜ್ಯದಲ್ಲಿ ಆಡಳಿತ ಮಾಡಿದೆ. ಕಾಂಗ್ರೆಸ್‌ನವರು ಅಧಿಕಾರ ಮಾಡಲು ಬಿಡಲಿಲ್ಲ. ಆದರೂ ರೈತರ ಸಾಲಮನ್ನಾ ಮಾಡಿದ್ದೇನೆ. ಸಾಕಷ್ಟು ಕ್ಷೇತ್ರಕ್ಕೆ ಅನುದಾನ ನೀಡಿ ಅಭಿವೃದ್ಧಿ ಮಾಡಿದ್ದೇನೆ ಎಂದು ತಿಳಿಸಿದರು.

ಎಲ್ಲಿದೆ ೫೦೦ ಕೋಟಿ:

ಚನ್ನಪಟ್ಟಣಕ್ಕೆ ನಮ್ಮ ಕನಕಪುರದ ಸ್ನೇಹಿತರ ಕೊಡುಗೆ ಏನು? ಕಾಂಗ್ರೆಸ್‌ನಿಂದ ಅಷ್ಟು ವರ್ಷ ರಾಜಕಾರಣ ಮಾಡಿದಾಗ ಏನು ಕೊಡುಗೆ ಕೊಟ್ಟರು. ಬಿಡದಿ ಹತ್ತಿರ ಅದೇನೊ ಗ್ರೇಟರ್ ಬೆಂಗಳೂರು ಮಾಡ್ತಾರಂತೆ. ಇವರಿಗೆ ನಾಡಿನ ಬಡವರ ಬಗ್ಗೆ ಕನಿಷ್ಠ ಕಾಳಜಿ ಇಲ್ಲ. ಈಗ ನನ್ನನ್ನ ಸಿಎಂ ಮಾಡಲು ಪೇಪರ್ ಪೆನ್ನು ಕೊಡಿ ಅಂದ್ರು. ಈಗ ಏನ್ಮಾಡ್ತಿದ್ದಾರೆ? ಬೆಂಗಳೂರಲ್ಲಿ ಚದರಕ್ಕೆ ಇಷ್ಟು ಎಂದು ಕಮಿಷನ್ ಪಡೆಯುತ್ತಿದ್ದಾರೆ. ಚನ್ನಪಟ್ಟಣಕ್ಕೆ ೫೦೦ ಕೋಟಿ ಕೊಟ್ಟಿದ್ದೇವೆ ಅಂದ್ರು. ಎಲ್ಲಿದೆ ೫೦೦ ಕೋಟಿ, ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಡಿಸಿಎಂ ನಮ್ಮನ್ನ ಸಾಕ್ಷಿಗುಡ್ಡೆ ಕೇಳ್ತಾರೆ. ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ, ಇಂಜಿನಿಯರಿಂಗ್ ಕಾಲೇಜು ಮಾಡಿದ್ದು ಯಾರು.? ರಾಮನಗರ ಜಿಲ್ಲೆ ಮಾಡಿದ್ದು ಯಾರು. ಈಗ ಏನೋ ಬೆಂಗಳೂರಿಗೆ ಸೇರಿಸ್ತಾರಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ದಾಖಲೆ ತೆಗೆಯಿರಿ:

ಚನ್ನಪಟ್ಟಣ ಅಭಿವೃದ್ಧಿ ಮಾಡಿದ್ದು ಯಾರು ಅಂತ ದಾಖಲೆ ತೆಗೆಯಿರಿ. ಎಷ್ಟು ಸೇತುವೆ ಮಾಡಿದ್ದೇವೆ ದಾಖಲೆ ನೋಡಿ. ದೇವೇಗೌಡರು ಹಾಗೂ ನಾನು ರೈತಪರ ಕೆಲಸ ಮಾಡಿದ್ದೇವೆ. ವಿಠ್ಠಲೇನಹಳ್ಳಿ ಗೋಲಿಬಾರ್ ಆಯ್ತು. ಯಾರಿಂದ ಗೋಲಿಬಾರ್ ಆಯ್ತು, ಇಬ್ಬರು ರೈತರು ಸತ್ತರು. ಶಿವಕುಮಾರ್ ಇದಕ್ಕೆ ಕಾರಣ ಯಾರು? ಆ ದಿನ ಇಲ್ಲಿಗೆ ಬಂದಿದ್ದು ದೇವೇಗೌಡರು. ಮೃತ ಕುಟುಂಬಕ್ಕೆ ಪರಿಹಾರ ಕೊಡಿಸಿದ್ದು ದೇವೇಗೌಡರು. ಈಗ ನಾಲ್ಕು ತಿಂಗಳಿನಿಂದ ಬರುತ್ತಿದ್ದಾರೆ. ಜನರಿಗೆ ಸೈಟ್ ಕೊಡ್ತೀವಿ, ಮನೆ ಕೊಡ್ತೀವಿ ಅಂತಾವ್ರೆ. ಸಾಗುವಳಿ ಮಾಡಿಕೊಂಡು ಬಂದ ರೈತರನ್ನ ಆಚೆ ಹಾಕಿದ್ದಾರೆ ಎಂದು ಆರೋಪಿಸಿದರು.

ಸಿಪಿವೈ ವಿರುದ್ಧ ವಾಗ್ದಾಳಿ:

ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದಾಗ ಚನ್ನಪಟ್ಟಣದ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾಗಿ ತಿಳಿಸಿದ್ದಾರೆ. ಆದರೆ ಭಗೀರಥ ಅಂತ ಹೆಸರು ತೆಗೆದುಕೊಂಡಿದ್ದು ಅವರು. ೨೦ ವರ್ಷ ಶಾಸಕರಾಗಿದ್ದರು. ಹಳ್ಳಿಗಳಲ್ಲಿ ಯಾವ ಅಭಿವೃದ್ಧಿ ಮಾಡಿದರು. ಅದೇನೋ ಸ್ವಾಭಿಮಾನಿ ಅಂತವನಲ್ಲ ಮಹಾನುಭಾವ. ನಮ್ಮ ಸರ್ಕಾರ ತೆಗೆದಾಗ ಸ್ವಾಭಿಮಾನ ಎಲ್ಲಿತ್ತು. ಅಂದು ನಾನು ಏನು ಅನ್ಯಾಯ ಮಾಡಿದ್ದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ನಮ್ಮ ಕಾರ್ಯಕರ್ತರಿಗೆ ನೋವು ಕೊಟ್ಟರು. ಎಲ್ಲವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನೀವೆ ನಿಲ್ಲಿ ಅಂತ ಈಗಿನ ಕಾಂಗ್ರೆಸ್ ಅಭ್ಯರ್ಥಿಗೆ ಹೇಳಿದ್ದೆ. ಆದರೆ ಅವರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ ಉಳಿಸಿದ್ದು ನಾನು, ಮಂಜುನಾಥ್ ಗೆಲ್ಲಿಸಿದ್ದು ನಾನು ಅಂತ ಹೇಳಿಕೊಂಡು ಓಡಾಡ್ತಿದ್ದಾರೆ ಎಂದು ಕಿಡಿಕಾರಿದರು.

ಟೋಪಿ ಹಾಕಿಹೋದರು:

ಉಪ ಚುನಾವಣೆಯಲ್ಲಿ ಯೋಗೇಶ್ವರ್ ನಿಲ್ಲೋದಕ್ಕೂ ನಾವು ಪರ್ಮಿಷನ್ ಕೊಟ್ಟಿದ್ದೆವು. ಆದರೆ ನಮಗೆ ಹಾಗೂ ಬಿಜೆಪಿಗೂ ಟೋಪಿ ಹಾಕಿ ಕಾಂಗ್ರೆಸ್ ಸೇರಿದ್ದಾರೆ. ಚನ್ನಪಟ್ಟಣದ ಜನತೆ ಮಾಡುವ ಆಶೀರ್ವಾದ ರಾಜ್ಯದಲ್ಲಿ ಬದಲಾವಣೆ ತರುತ್ತೆ. ನನಗೆ ಆರೋಗ್ಯದ ಸಮಸ್ಯೆ ಇದ್ರೂ ಕೆಲಸ ಮಾಡ್ತಿದ್ದೇನೆ. ಇಡೀ ದೇಶ ಸುತ್ತುತ್ತಿದ್ದೇನೆ, ಮೋದಿ ಕೊಟ್ಟಿರೋ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದು ಹೇಳಿದರು.

ಬಾಲಕೃಷ್ಣ ವಿರುದ್ಧ ಕಿಡಿ:

ಮಾಗಡಿಯ ಹಳೇ ಸ್ನೇಹಿತ ಇಲ್ಲಿ ಬಂದಿದ್ದಾನೆ. ದುಡ್ಡು ಹಿಡ್ಕೊಂಡು ರಾತ್ರಿ ವೇಳೆ ಮನೆಮನೆ ಸುತ್ತುತ್ತಿದ್ದಾನೆ. ಎಷ್ಟು ಬೇಕು ಹೇಳಿ ಅಂತಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನನ್ನ ಹಳೇ ಸ್ನೇಹಿತ ಯೋಗೇಶ್ವರ್ ಅಂತ ತಬ್ಬಿಕೊಂಡು ಬೆನ್ನು ತಟ್ತಾರೆ. ಇವರ ಆಟವನ್ನ ದೇವರು ನೋಡ್ತಿದ್ದಾನೆ. ಇದನ್ನು ನೋಡಿದ್ರೆ ನಗು ಬರುತ್ತೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಎಚ್ಡಿಕೆ ವ್ಯಂಗ್ಯವಾಡಿದರು.

ಮುಸಲ್ಮಾನ ಸಮುದಾಯದವರು ಬಂದು ಇವತ್ತು ಶಕ್ತಿ ನೀಡಿದ್ದಾರೆ. ನನ್ನ ಅಭಿಪ್ರಾಯದಲ್ಲಿ ೫೦ ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ನಿಖಿಲ್ ಗೆಲ್ಲುವ ವಿಶ್ವಾಸ ನನಗಿದೆ ಎಂದು ಕುಮಾರಸ್ವಾಮಿ ಹೇಳಿದರು.

(ರೋಡ್‌ಶೋದು ಒಂದು ಫೋಟೋ ಬಳಸಿ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ