ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಈವರೆಗೆ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಬಿಜೆಪಿ - ಜೆಡಿಎಸ್ ಪಕ್ಷಗಳು ದೋಸ್ತಿ ಸಾಧಿಸಿದ್ದು, ಇದೇ ಮೊದಲ ಬಾರಿ ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿಗೆ ಮುಂದಾಗಿದೆ.
ಜೆಡಿಎಸ್ ನಿಂದ 3 ಹಾಗೂ ಬಿಜೆಪಿ ಪಕ್ಷದಿಂದ 1 ಬಾರಿ ಗೆಲುವು ಸಾಧಿಸಿದ್ದ ಪುಟ್ಟಣ್ಣ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರುವ ಮೂಲಕ ಎರಡೂ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ ಪಕ್ಷದ ವರಿಷ್ಠರ ಕುಟುಂಬದ ಪ್ರತಿಷ್ಠೆಯನ್ನೇ ಪಣಕ್ಕಿರಿಸಿರುವ ದಳಪತಿಗಳು, ಕಮಲದ ಸಾಥ್ ಪಡೆದು ಕ್ಷೇತ್ರದಲ್ಲಿ ಪಾರಮ್ಯ ಮುಂದುವರೆಸಲು ಯತ್ನಿಸುತ್ತಿದೆ.
ದಶಕಗಳ ಕಾಲದಿಂದಲೂ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಸಾಧ್ಯವಾಗದ ಕಾಂಗ್ರೆಸ್ ಪಕ್ಷ, ಕಳೆದ ಬಾರಿ ಹೊಸ ಮುಖ ಪ್ರವೀಣ್ ಪೀಟರ್ ಅವರನ್ನು ಕಣಕ್ಕಿಳಿಸಿತ್ತು. ಆದರೀಗ ಪ್ರಬಲವಾಗಿರುವ ಪುಟ್ಟಣ್ಣ ಅಭ್ಯರ್ಥಿಯಾಗಿರುವುದು ಕಾಂಗ್ರೆಸ್ ನಲ್ಲಿ ಹೊಸ ಭರವಸೆ ಮೂಡಿಸಿದೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ ಅವರನ್ನು ಕಣಕ್ಕಿಳಿಸಿರುವ ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳು, ಪುಟ್ಟಣ್ಣ ಅವರಿಗೆ ಸೋಲಿನ ರುಚಿ ತೋರಿಸುವ ಉಮೇದಿನಲ್ಲಿವೆ.ಕಳೆದ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಯಾಗಿ ಚಂದ್ರಶೇಖರ ಸ್ಪರ್ಧಿಸಿದರೆ, ಐವರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದು, ರಂಗನಾಥ ಎಂಬ ಹೆಸರಿನವರೇ ಮೂವರಿದ್ದರು. ಆಗಲೂ ಪುಟ್ಟಣ್ಣ ಗೆಲುವು ಸಾಧಿಸುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡರು.
ನೇರ ಹಣಾಹಣಿ:
2020ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಗೆಲುವು ಸಾಧಿಸಿದ ಪುಟ್ಟಣ್ಣ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದರು.
ರಂಗನಾಥ ಮೂರು ವರ್ಷದಿಂದ ಈಚೆಗೆ ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹೋರಾಟಗಳಲ್ಲಿ ಭಾಗಿಯಾದವರು. ಕಳೆದ ನಾಲ್ಕೈದು ತಿಂಗಳಿನಿಂದಲೇ ಉಪ ಚುನಾವಣೆಗೆ ಪೂರ್ವಸಿದ್ಧತೆ ನಡೆಸಿದ್ದಾರೆ. ವೈಯಕ್ತಿಕ ಬಲಕ್ಕಿಂತಲೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ , ಎಚ್.ಡಿ. ಕುಮಾರಸ್ವಾಮಿ ವರ್ಚಸ್ಸು ಅವರ ಮತ ಗಳಿಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಅಲ್ಲದೆ, ಬಿಜೆಪಿ ಮತ್ತು ಸಂಘ ಪರಿವಾರದ ಶಿಕ್ಷಕ ಸಂಘಟನೆಗಳ ಬಲವೂ ಈಗ ರಂಗನಾಥ ಅವರ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಪುಟ್ಟಣ್ಣ ಮತ್ತು ರಂಗನಾಥ ಇಬ್ಬರೂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿದ್ದವರು. ಪುಟ್ಟಣ್ಣ 22 ವರ್ಷಗಳ ಕೆಲಸದ ಪಟ್ಟಿ ಹಿಡಿದು ಮತ ಯಾಚಿಸುತ್ತಿದ್ದಾರೆ. ಒಮ್ಮೆ ಅವಕಾಶ ಕೊಟ್ಟು ನೋಡಿ ಎಂದು ರಂಗನಾಥ ಶಿಕ್ಷಕರ ಮನವೊಲಿಕೆಗೆ ಇಳಿದಿದ್ದಾರೆ. ಮೂರು ಪಕ್ಷಗಳ ನಾಯಕರ ಪಾಲಿಗೂ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.ಬಾಕ್ಸ್ .............
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಉಪಚುನಾವಣೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಪಾಲಿಗೆ ಪ್ರತಿಷ್ಠೆಯ ಕಣವಾಗಿ ರೂಪುಗೊಂಡಿದೆ. ಬಿಜೆಪಿಗೆ 17 ಶಾಸಕರು, 4 ಸಂಸದರ ಬಲವಿದೆ. ಜೆಡಿಎಸ್ 01 ಶಾಸಕರ ಬೆಂಬಲ ಹೊಂದಿದೆ. ಕಾಂಗ್ರೆಸ್ 18 ಶಾಸಕರು ಮತ್ತು ಒಬ್ಬ ಸಂಸದರನ್ನು ಹೊಂದಿದೆ.
2020 ರ ಚುನಾವಣೆ ನೋಟ
ಗೆದ್ದವರು: ಪುಟ್ಟಣ್ಣ (ಬಿಜೆಪಿ)ಪಡೆದ ಮತ - 7,335
ಸಮೀಪದ ಪ್ರತಿಸ್ಪರ್ಧಿ :ಎ.ಪಿ.ರಂಗನಾಥ್ (ಜೆಡಿಎಸ್)
ಪಡೆದ ಮತ: 5,107ಅಂತರ - 2,228 ಮತ
31ಕೆಆರ್ ಎಂಎನ್ 3,4.ಜೆಪಿಜಿ3.ಪುಟ್ಟಣ್ಣ
4.ಎ.ಪಿ.ರಂಗನಾಥ