ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗಾರೊರಂದಿಗೆ ಮಾತನಾಡಿದ ಅವರು, ಸಿ.ಎಸ್.ಪುಟ್ಟರಾಜು ಅವರು ಎಚ್.ಡಿ.ದೇವೇಗೌಡರ ಕುಟುಂಬದ ಮಾನಸ ಪುತ್ರರು. ರಾಜಕೀಯವಾಗಿ ನಿಮ್ಮಷ್ಟೆ ಸಮಾನವಾಗಿ ಬೆಳೆದಿರುವ ರಾಜಕಾರಣಿ ಅಂತಹ ನಾಯಕ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿಗೆ ಸಲಹೆ ನೀಡಿದರು.
ಚಲುವರಾಯಸ್ವಾಮಿ ಅವರು ಜಿಪಂ ಉಪಾಧ್ಯಕ್ಷರನ್ನಾಗಿ ಮಾಡಲು, ಸಚಿವರಾಗಿ ಮಾಡಲು ಸಿ.ಎಸ್.ಪುಟ್ಟರಾಜು ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾಲುಕಟ್ಟಲಿಲ್ವ ಎಂದು ತಿರುಗೇಟು ನೀಡಿದರು.ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಕಾಂಗ್ರೆಸ್ ನಾಯಕರ ಮನೆಬಾಗಿಲು ತಟ್ಟಿರುವುದನ್ನು ಸಚಿವ ಚಲುವರಾಯಸ್ವಾಮಿ ಸಾಬೀತು ಪಡಿಸಿದರೆ ಪುಟ್ಟರಾಜು ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತಾರೆ. ತಾಕತ್ತಿದ್ದರೆ ಸಾಬೀತುಪಡಿಸಿ ಎಂದು ಸವಾಲು ಹಾಕಿದರು.
ಚಲುವರಾಯಸ್ವಾಮಿ ಅವರೇ ನಿಮ್ಮ ರಾಜಕೀಯ ಬೆಳವಣಿಗೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಗೊಬ್ಬರಹಾಕಿ ಬೆಳೆಸಿದ್ದಾರೆ ಎನ್ನುವುದನ್ನು ಮರೆತು ಗೌರವ ನೀಡದೆ ಟೀಕೆ ಮಾಡುವುದು ಸರಿಯಲ್ಲ ಎಂದರು.
ದೆಹಲಿಯಲ್ಲಿ ನಡೆದ ಸರ್ವಪಕ್ಷದ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಿಲ್ಲವೇ?, ಒಬ್ಬ ಕೇಂದ್ರದ ಸಚಿವರು ಜನತಾದರ್ಶನ ನಡೆಸಿದರೆ ಅಧಿಕಾರಿಗಳು ಸಭೆಗೆ ಹೋಗದಂತೆ ಸುತ್ತೊಲೆ ಹೊರಡಿಸಿ ದ್ವೇಷದ ರಾಜಕೀಯ ಮಾಡುತ್ತೀರಾ ಎಂದು ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಿದ ಬಳಿಕ ಸಚಿವ ಚಲುವರಾಯಸ್ವಾಮಿ ಅವರ ಮಾತಿನ ಶೈಲಿಯೇ ಬದಲಾಗಿದೆ. ಅಧಿಕಾರದ ಅಮಲು ತಲೆಗೆ ಏರಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್ ಮಾತನಾಡಿ, ಕೇಂದ್ರ ಸಚಿವ ಎಚ್‌ಡಿಕೆ ಅಭಿನಂದನೆ ಸಮಾರಂಭಕ್ಕೆ ಬಂದ ಜನರು ಹಸಿದು ಹೋಗಬಾರದೆಂದು ಊಟದ ವ್ಯವಸ್ಥೆ ಮಾಡಿದ್ದೇವೆ. ಇದರಿಂದ ಸಾವಿರಾರು ಸಂಖ್ಯೆಯಲ್ಲಿ ಊಟ ಮಾಡಿ ಹೋಗಿದ್ದಾರೆ. ಇದು ಜನರನ್ನು ತೋರಿಸಬೇಕು ಎಂಬ ಉದ್ದೇಶ ನಮ್ಮದಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಚಲುವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ರಾಮಕೃಷ್ಣೇಗೌಡ, ವಿ.ಎಸ್.ನಿಂಗೇಗೌಡ, ಪುರಸಭೆ ಸದಸ್ಯರಾ ಗಿರೀಶ್, ಸೋಮಶೇಖರ್, ಬೊಮ್ಮರಾಜು, ಆನಂದ್, ಮಲ್ಲಿಗೆರೆ ರವಿಕರ ಸೇರಿದಂತೆ ಹಲವರು ಇದ್ದರು.