ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕೂಂಬಿಂಗ್ ಕಾರ್ಯಾಚರಣೆಗಾಗಿ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ ಹುಲಿಗಳು ಇರುವಿಕೆ ಡ್ರೋಣ್ ನಲ್ಲಿ ಸೆರೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಚಾಮರಾಜನಗರ ತಾಲೂಕಿನ ನಂಜೇದೇವನಪುರದ ಕುಮಾರಸ್ವಾಮಿ ಎಂಬವರ ಜಮೀನಿನಲ್ಲಿ 5 ಹುಲಿ ಓಡಾಟ ಪತ್ತೆ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದು ಎರಡು ದಿನ ಮೂರು ಗ್ರಾಮಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ಚಾಮರಾಜನಗರ ತಹಸಿಲ್ದಾರ್ ಗಿರಿಜಾ ಆದೇಶಿಸಿದ್ದಾರೆ. ಚಾಮರಾಜನಗರ ತಾಲೂಕಿನ ನಂಜೇದೇವನಪುರ ಆನೆಮಡುವಿನ ಕೆರೆ ಪಕ್ಕದ ಕ್ವಾರಿ ಬಳಿ ಡ್ರೋನ್ ಕ್ಯಾಮರದಲ್ಲಿ ಐದು ಹುಲಿಗಳು ಸೆರೆಯಾದ ಹಿನ್ನೆಲೆನಂಜೆದೇವನಪುರ ಸೇರಿ ಉಡಿಗಾಲ, ವೀರನಪುರ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿ. 22 ಹಾಗೂ 23 ರಂದು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ
ಹುಲಿ ಕಾರ್ಯಾಚರಣೆ ಹಿನ್ನೆಲೆ ಶಾಸಕ ಸಿ.ಪುಟ್ಟರಂಗಶೆಟ್ಟಿ ನಂಜೇದೇವನಪುರಕ್ಕೆ ಭೇಟಿ ನೀಡಿದ ಶಾಸಕರು ಖುದ್ದು ಪರಿಶೀಲನೆ ನಡೆಸಿದರು. 5 ಹುಲಿಗಳಿರುವ ಹಿನ್ನೆಲೆ ಸೆರೆ ಹಿಡಿಯಲು ಕಷ್ಟವಾಗಲಿದೆ. ಈ ಹಿನ್ನಲೆ, ಆನೆಗಳನ್ನು ಬಳಸಿಕೊಂಡು ಹುಲಿಗಳನ್ನು ಕಾಡಿಗೆ ಓಡಿಸುವ ಕೆಲಸ ಮಾಡುತ್ತೇವೆಂಬ ಅರಣ್ಯ ಇಲಾಖೆ ಮಾತಿಗೆ ರೈತರು ವಿರೋಧ ವ್ಯಕ್ತಪಡಿಸಿ ಹುಲಿಗಳನ್ನು ಕಾಡಿಗೆ ಅಟ್ಟಬಾರದು, ಸೆರೆ ಹಿಡಿಯಬೇಕೆಂದು ಒತ್ತಾಯಿಸಿದರು.
ಶಾಸಕ ಪುಟ್ಟರಂಗಶೆಟ್ಟಿ ಮಾತಿಗೆ ಸಹಮತ ನೀಡಿದ ಸಿಎಂ ಸಿದ್ದರಾಮಯ್ಯ, ಈಗಲೇ ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆಂದು ಭರವಸೆ ಕೊಟ್ಟರು.