ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉಚಿತ ಟಿ.ಸಿ ಪೂರೈಕೆ ವ್ಯವಸ್ಥೆಯನ್ನು ಮರು ಜಾರಿಗೊಳಿಸದಿದ್ದರೆ ವಿದ್ಯುತ್ ಬಳಕೆದಾರ ರೈತರು ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿದ್ದವು. ಬಿಜೆಪಿ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತ ಸಂಘಟನೆಗಳು ಹೋರಾಟ ನಡೆಸಿದ್ದವು. ಅಂದು ಕಾಂಗ್ರೆಸ್ಸಿಗರೂ ಸಹಕಾರ ನೀಡಿದ್ದರು. ಬಿಜೆಪಿ ಸರ್ಕಾರ ಕಿತ್ತೊಗೆದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ರೈತರ ಹೋರಾಟವೂ ಪ್ರಮುಖ ಕಾರಣ ಎಂದರು.ಕಾಂಗ್ರೆಸ್ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಬದಲು ಪಂಪ್‌ಸೆಟ್ ಆಧಾರಿತ ಕೃಷಿಕರಿಗೆ ಅಗತ್ಯ ವಿದ್ಯುತ್ ಪರಿವರ್ತಕ(ಟಿ.ಸಿ) ನೀಡಲು ಶೇ.20 ರಷ್ಟು ಹಣ ಕಟ್ಟುವಂತೆ ಹೊಸ ನೀತಿ ಜಾರಿಗೊಳಿಸಿದೆ. ಇದರಿಂದ ಒಂದು ಟಿಸಿ ಪಡೆಯಲು ರೈತ ಲಕ್ಷಾಂತರ ಹಣವನ್ನು ಕಟ್ಟಬೇಕಾದ ಸಂಕಷ್ಠಕ್ಕೆ ಸಿಲುಕಿದ್ದಾನೆ ಎಂದರು.
ಬರಡು ಭೂಮಿಯನ್ನು ನೀರಾವರಿಗೆ ಒಳಪಡಿಸಬೇಕಾದರೆ ರಾಜ್ಯ ಸರ್ಕಾರ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಪ್ರತಿವರ್ಷ ಸಾವಿರಾರು ಕೋಟಿ ವ್ಯಯಿಸುವ ಬದಲು ತನ್ನ ಸ್ವಂತ ಹಣದಿಂದಲೇ ತನ್ನ ಭೂಮಿ ಕೃಷಿ ಉತ್ಪಾದನೆಗೆ ಬಳಕೆ ಮಾಡುವ ರೈತನಿಗೆ ಒಂದೇ ಒಂದು ಸಲ ಉಚಿತ ಟಿ.ಸಿ.ನೀಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್ ಇದ್ದರು.