ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಪುತ್ತಿಗೆ ಮಹೋತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬುಧವಾರ ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಧಾರ್ಮಿಕ ಕ್ಷೇತ್ರಗಳ ಸಂಪತ್ತನ್ನು ಕೊಳ್ಳೆ ಹೊಡೆಯುವ ಹುನ್ನಾರ ಸರ್ಕಾರಗಳಿಂದ ನಡೆದಿದೆ ಎಂದು ಖೇದ ವ್ಯಕ್ತಪಡಿಸಿದರು.
ಮಂಗಳೂರಿನ ಡಾ. ಅರುಣ್ ಉಳ್ಳಾಲ ಧಾರ್ಮಿಕ ಉಪನ್ಯಾಸ ನೀಡಿ, ನಾವಿಂದು ಅಧುನೀಕರಣಕ್ಕೆ ತೆರೆದುಕೊಂಡಂತೆ ನಮ್ಮ ಸಂಸ್ಕೃತಿ ಮಾತ್ರವಲ್ಲ, ಊರು ಸಹಿತ ವಿವಿಧ ವಿಚಾರಗಳ ಮೂಲ ಹೆಸರುಗಳಲ್ಲಿ ಬದಲಾಯಿಸುತ್ತಿದ್ದೇವೆ. ಸಮರ್ಥ ಆಡಳಿತ ಮಂಡಳಿಯೊಂದಿಗೆ ಸಹಸ್ರಾರು ಕರಸೇವಕರು ತಮ್ಮಿಂದ ಸಾಧ್ಯವಾಗುವಷ್ಟು ಸೇವೆ ಮಾಡಿರುವುದರಿಂದ ಪುತ್ತೆ ಬ್ರಹ್ಮಕಲಶವು ಮಾದರಿ ಬ್ರಹ್ಮಕಲಶವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ , ಭಗವಂತ ನಮ್ಮಲ್ಲಿದ್ದಾನೆ. ನಮ್ಮನ್ನು ನಾವು ಭಗವಂತನಿಗೆ ಅರ್ಪಿಸಿಕೊಳ್ಳಬೇಕು. ನಮ್ಮಲ್ಲಿರುವ ಅಹಂಕಾರವನ್ನು ದೂರ ಮಾಡಿ ಸರಳ ಜೀವನವನ್ನು ಮಾಡಿದಲ್ಲಿ ದೇವರಿಗೆ ಹತ್ತಿರವಾಗುತ್ತೇವೆ ಎಂದರು.
ಶ್ರೀಕ್ಷೇತ್ರ ಕಟೀಲಿನ ಲಕ್ಷ್ಮೀ ನಾರಾಯಣ ಆಸ್ರಣ್ಣ, ಮೂಡುವೇಣುಪುರ ಶ್ರೀ ವೆಂಕಟರಮಣ ಹಾಗೂ ಶ್ರೀ ಹನುಮಂತ ದೇವಳಗಳ ಆಡಳಿತ ಮೊಕ್ತೇಸರ ಉಮೇಶ್ ಜಿ. ಪೈ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್, ರಾಷ್ಟ್ರೀಯ ಹೆದ್ದಾರಿ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಪ್ರಸಾದ್ ಅಜಿಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಜೀರ್ಣೋದ್ಧಾರ ಸಮಿತಿಯ ಪ್ರಮುಖ ಕೆ.ಶ್ರೀಪತಿ ಭಟ್ ಇದ್ದರು.
ಡಾ.ಯೋಗೀಶ್ ಕೈರೋಡಿ ನಿರೂಪಿಸಿದರು.