ಕೇರಳದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯುವ ಕನಸು ಈ ಬಾರಿ ನನಸು: ಸುರೇಂದ್ರನ್‌ ವಿಶ್ವಾಸ

KannadaprabhaNewsNetwork |  
Published : May 04, 2026, 03:00 AM IST
ಫೋಟೋ: ೧ಪಿಟಿಆರ್-ಬಿಜೆಪಿ  ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮಾತನಾಡಿದರು. | Kannada Prabha

ಸಾರಾಂಶ

ಕೇರಳ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಂಘಟಿತ ಪ್ರಯತ್ನಗಳು ನಡೆದಿದೆ. ಈ ಬಾರಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುವ ಕನಸು ಖಂಡಿತವಾಗಿಯೂ ಈಡೇರಲಿದೆ ಎಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಹೇಳಿದರು.

ಪುತ್ತೂರು : ಕೇರಳ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸಂಘಟಿತ ಪ್ರಯತ್ನಗಳು ನಡೆದಿದೆ. ಈ ಬಾರಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುವ ಕನಸು ಖಂಡಿತವಾಗಿಯೂ ಈಡೇರಲಿದೆ ಎಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಹೇಳಿದರು.ಅವರು ಶುಕ್ರವಾರ ಪುತ್ತೂರಿಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು.ಕೇರಳದಲ್ಲಿ ಸಂಘಟನಾ ದೌರ್ಬಲ್ಯಗಳನ್ನು ಮರೆಯಾಗುವಂತೆ ಈ ಬಾರಿ ಕರ್ನಾಟಕದ ಬಿಜೆಪಿಯೂ ಸೇರಿಕೊಂಡು ಕೆಲಸ ಮಾಡಿದೆ. ಎಲ್ಲರ ಸಹಕಾರದಿಂದ ಇಲ್ಲಿನ ಹಲವು ಮಂದಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಂತ ಖರ್ಚುಗಳನ್ನು ಮಾಡಿಕೊಂಡು ಅಲ್ಲಿ ಬಂದು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ನಿಮ್ಮ ಶ್ರಮ, ಪ್ರೀತಿ ನಮ್ಮ ಹೃದಯದಲ್ಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲದ ಲೋಕೇಶ್ ಚಾಕೋಟೆ ವೇದಿಕೆಯಲ್ಲಿದ್ದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸ್ವಾಗತಿಸಿದರು.

ದೇವಾಲಯಗಳಿಗೆ ಭೇಟಿ: ಸುರೇಂದ್ರನ್ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರಿಗೆ ತುಪ್ಪದ ದೀಪ ಬೆಳಗಿ ಗೆಲುವಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ಸುರೇಂದ್ರನ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಬಳಿಕ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ಬಿಜೆಪಿ ಮುಖಂಡ ಪ್ರಸನ್ನ ಮಾರ್ತ ಅವರ ಮನೆಗೆ ಭೇಟಿ ನೀಡಿದರು.ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ್ ಉಜಿರೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಸುನೀತ್ ಭಟ್, ಶಶಿಧರ್ ನಾಯಕ್, ನಾಗೇಂದ್ರ ಬಾಳಿಗ, ಶರತ್ ಆಳ್ವ, ಕಿರಣ್ ಬಲ್ನಾಡ್, ನಿರಂಜನ ಮಾನ್ಯ, ಹರಿಪ್ರಸಾದ್ ಯಾದವ್, ವಿರೂಪಾಕ್ಷ ಭಟ್, ರಾಜೇಶ್ ಬನ್ನೂರು, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ವಸಂತಲಕ್ಷ್ಮೀ, ವಿದ್ಯಾಗೌರಿ, ಗೌರಿ ಬನ್ನೂರು ಮತ್ತಿತರರು Fದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಲೋಕ್‌ ಅದಾಲತ್‌
ಸತ್ಪುರುಷರ ಒಡನಾಟದಿಂದ ಬದುಕು ಸಾರ್ಥಕ: ಹಿರಿಯ ನಟ ಶ್ರೀಧರ