ಪತ್ರಕರ್ತ ಅನೀಶ್ ಕುಮಾರ್‌ಗೆ ‘ಕೇರಳ - ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

KannadaprabhaNewsNetwork |  
Published : Nov 26, 2026, 02:45 AM IST
ಫೋಟೋ: 21ಪಿಟಿಆರ್-ಅನೀಶ್ ಮರೀಲ್ | Kannada Prabha

ಸಾರಾಂಶ

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ನೇತೃತ್ವದಲ್ಲಿ ನಡೆಯಲಿರುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ 2026, ಕೇರಳ ಕರ್ನಾಟಕ ಉತ್ಸವ ಇದರ ಪ್ರತಿಷ್ಠಿತ ‘ಕೇರಳ - ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಗೆ ಪುತ್ತೂರಿನ ಪತ್ರಕರ್ತರಾದ ಅನೀಶ್ ಕುಮಾರ್ ಕೆ. ಆಯ್ಕೆಯಾಗಿದ್ದಾರೆ. 29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ, ಕಾಸರಗೋಡು ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ನೇತೃತ್ವದಲ್ಲಿ ನಡೆಯಲಿರುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ 2026, ಕೇರಳ ಕರ್ನಾಟಕ ಉತ್ಸವ ಇದರ ಪ್ರತಿಷ್ಠಿತ ‘ಕೇರಳ - ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಗೆ ಪುತ್ತೂರಿನ ಪತ್ರಕರ್ತರಾದ ಅನೀಶ್ ಕುಮಾರ್ ಕೆ. ಆಯ್ಕೆಯಾಗಿದ್ದಾರೆ. 29ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ, ಕಾಸರಗೋಡು ಅಧ್ಯಕ್ಷ ಶಿವರಾಮ ಕಾಸರಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ರ ನ. 28 ಮತ್ತು 29ರಂದು ಎರಡು ದಿನಗಳ ಕಾಲ ನಡೆಯುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ - 2026, ಕೇರಳ-ಕರ್ನಾಟಕ ಉತ್ಸವ, ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ, ಕೇರಳ - ಕರ್ನಾಟಕ ಭವನದ ಭೂಮಿಪೂಜೆ, ಶಿಲಾನ್ಯಾಸ ಸಮಾರಂಭವು 2026 ನ. 28ರಂದು ಬೆಳಗ್ಗೆ ಗಂಟೆ 10ಕ್ಕೆ ನಡೆಯಲಿದೆ. 29 ರಂದು ಮಧ್ಯಾಹ್ನ 3ಕ್ಕೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರತಿಷ್ಠಿತ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪುತ್ತೂರಿನಲ್ಲಿ ಕಳೆದ 16 ವರ್ಷಗಳಿಂದ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅನೀಶ್ ಕುಮಾರ್ ಅವರು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಸದಸ್ಯರಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗರ್ಭಿಣಿಯಾದ ಅಪ್ರಾಪ್ತೆ: ಪೋಕ್ಸೋ ಕೇಸ್‌ ದಾಖಲು
ಇಳಕಲ್ಲಿಗೆ ಬಂತು ಕನ್ನಡ ಬಂಡಾರದ ರಥ