ಪುತ್ತೂರು: ಐವನ್ ಡಿಸೊಜ ವಿರುದ್ಧ ಬಿಜೆಪಿ ಯುವಮೋರ್ಚಾ ದೂರು

KannadaprabhaNewsNetwork |  
Published : Aug 22, 2024, 12:46 AM IST
ಫೋಟೋ: 21ಪಿಟಿಆರ್‌-ದೂರುಐವನ್‌ ಡಿಸೋಜ ವಿರುದ್ದ ಪ್ರಕರಣ ದಾಖಲಿಸುವಂತೆ ದೂರು ನೀಡಲಾಯಿತು.  | Kannada Prabha

ಸಾರಾಂಶ

ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರ ಠಾಣೆಯಲ್ಲಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ದೂರು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರ ಠಾಣೆಯಲ್ಲಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಯುವಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ, ಉಪಾಧ್ಯಕ್ಷ ಆದೇಶ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷ ಭಟ್, ಹಿರಿಯ ಬಿಜೆಪಿ ಮುಖಂಡ ಸುರೇಶ್ ಆಳ್ವ, ಅನಿಲ್ ತೆಂಕಿಲ, ಉಮೇಶ್ ಕೋಡಿಬೈಲು, ರಾಜೇಶ್ ರೈ ಪರ್ಪುಂಜ, ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಸತೀಶ್ ನಾಯ್ಕ್ ಪರ್ಲಡ್ಕ, ಹರಿಪ್ರಸಾದ್ ಯಾದವ್, ನಾಗೇಶ್ ಪ್ರಭು, ನಿತೇಶ್ ಶಾಂತಿವನ, ಜಯಶ್ರೀ ಶೆಟ್ಟಿ, ದಿವ್ಯಾ ಪುರುಷೋತ್ತಮ, ವಿಶ್ವನಾಥ ಕುಲಾಲ್, ಹರೀಶ್ ಬಿಜತ್ರೆ, ರತನ್ ರೈ ಕುಂಬ್ರ, ಶಿವಕುಮಾರ್ ಕಲ್ಲಿಮಾರ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಥಣಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ
ಪು4...ಲೀಡ್‌.... ಕಲಾವಿದರಿಗೆ ಬೇಕಿದೆ ಸಮಾಜ, ಸರ್ಕಾರದ ನೆರವು