ಕನ್ನಡಪ್ರಭ ವಾರ್ತೆ ಪುತ್ತೂರು
ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ವೀಕ್ಷಿಸಿದರು. ಬಳಿಕ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ, ಎಪಿಎಂಸಿ ರಸ್ತೆಯಲ್ಲಿರುವ ರಾಜಕಾಲುವಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು.
ರಾಜಕಾಲುವೆ ಸ್ವಚ್ಚಗೊಳಿಸುವ ಕಾಮಗಾರಿಯ ಬಗ್ಗೆ ನಗರಸಭಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಹಾಯಕ ಆಯುಕ್ತರು ಸ್ವಚ್ಚತಾ ಕಾಮಗಾರಿ ಶೀಘ್ರವಾಗಿ ಹಾಗೂ ಸಮಪರ್ಕವಾಗಿ ನಡೆಸುವಂತೆ ಸೂಚನೆ ನೀಡಿದರು. ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು.ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಮಳೆಗಾಲದ ಪೂರ್ವಭಾವಿಯಾಗಿ ರಾಜಕಾಲುವೆಗಳನ್ನು ಶುಚಿಗೊಳಿಸಲಾಗುತ್ತಿದೆ. ರಾಜಕಾಲುವೆಗಳಲ್ಲಿ ತ್ಯಾಜ್ಯ ತುಂಬಿರುವ ದೂರುಗಳೂ ಬಂದಿತ್ತು. ಕಳೆದ ವರ್ಷವೂ ನಗರ ಸಭೆಯಿಂದ ೧೦ ಲಕ್ಷ ರು. ವೆಚ್ಚದಲ್ಲಿ ರಾಜಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್, ನಗರಸಭಾ ಪೌರಾಯುಕ್ತ ಬದ್ರುದ್ದೀನ್ ಸೌದಾಗರ, ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದುರ್ಗಾಪ್ರಸಾದ್, ಶಬರಿನಾಥ್ ರೈ, ಸಹಾಯಕ ಅಭಿಯಂತರ ಕೃಷ್ಣ ಮೂರ್ತಿ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ., ಶ್ವೇತಾಕಿರಣ್, ನಗರಸಭೆ ನೀರು ಸರಬರಾಜು ವಿಭಾಗ ಜಲಸಿರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾದೇಶ್, ಎಂಜಿನಿಯರ್ ಗೌತಮ್ , ಸಹಾಯಕ ಎಂಜಿನಿಯರ್ ಸುನೀಲ್ ಮತ್ತಿತರರು ಉಪಸ್ಥಿತರಿದ್ದರು.