ವಿವೇಕಾನಂದ ಕಾಲೇಜು ಕ್ಯಾಂಪಸ್ ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿಗೆ ಮನವಿ

KannadaprabhaNewsNetwork |  
Published : Jun 20, 2026, 03:00 AM IST
ಫೊಟೋ: ೧೮ಪಿಟಿಆರ್-ಮನವಿಹೊಂಡ ಗುಂಡಿ ಹೊಂದಿರುವ ಸೇತುವೆ ರಸ್ತೆ | Kannada Prabha

ಸಾರಾಂಶ

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ರಸ್ತೆ ಗುಂಡಿಗಳನ್ನು ಸರಿಪಡಿಸಿ ಡಾಮರೀಕರಣಗೊಳಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘ ಮನವಿ ಮಾಡಿದೆ.

ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆ ರಸ್ತೆ ಗುಂಡಿಗಳನ್ನು ಸರಿಪಡಿಸಿ ಡಾಮರೀಕರಣಗೊಳಿಸಲು ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘ ಮನವಿ ಮಾಡಿದೆ.ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರಿನ ವಿವಿಧ ಶಿಕ್ಷಣ ಸಂಸ್ಥೆಗಳಿರುವ ವಿವೇಕಾನಂದ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಸಂಕದ ರಸ್ತೆ ಪ್ರಸ್ತುತ ಹದಗೆಟ್ಟಿದ್ದು, ಹಲವೆಡೆ ದೊಡ್ಡ ಗುಂಡಿಗಳು ಉಂಟಾಗಿವೆ. ಈ ರಸ್ತೆಯಲ್ಲಿ ಪ್ರತಿ ದಿನ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಬಳಸುತ್ತಿದ್ದು, ರಸ್ತೆ ಹದಗೆಟ್ಟಿರುವುದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.

ಈ ರಸ್ತೆ ಮಳೆಗಾಲದಲ್ಲಿ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ ಸಂಭವ ಹೆಚ್ಚಾಗಿದ್ದು, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ, ರಸ್ತೆಯಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಿ, ಸಂಪೂರ್ಣ ರಸ್ತೆಯನ್ನು ಡಾಮರೀಕರಣಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಮನವಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಜೆ.ಟಿ.ಪಾಟೀಲರನ್ನ ಸಂಪುಟದಲ್ಲಿ ಸೇರಿಸಿಕೊಳ್ಳಿ
ನೀರಿಗಾಗಿ ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ