ಕನ್ನಡಪ್ರಭ ವಾರ್ತೆ ಪುತ್ತೂರು
ಬಳಿಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ತಂತ್ರ ಸುತ್ತು, ಉಡಿಕೆ ಸುತ್ತು, ಚೆಂಡೆ ಸುತ್ತು ನಡೆಯಿತು. ಆ ಬಳಿಕ ವಸಂತಕಟ್ಟೆ ಪೂಜೆ, ಸೇವೆಯ ವಾದ್ಯ ಸುತ್ತುಗಳು, ಶಂಖ, ಜಾಗಟೆ ಸುತ್ತು, ಬ್ಯಾಂಡ್ ವಾಲಗ ಸುತ್ತು ಮತ್ತು ಸರ್ವ ವಾದ್ಯ ಸುತ್ತು ನಡೆಯಿತು. ನಂತರ ದೇವರಿಗೆ ಮಹಾಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಮಧ್ಯಾಹ್ನ ವಿಷು ಕಣಿಯ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.ಸಂಜೆ ದೇವಳದ ಹೊರಾಂಗಣದಲ್ಲಿ ದೇವರ ಬಲಿ ಉತ್ಸವ ನಡೆಯಿತು. ಬಳಿಕ ಪೂರ್ವಶಿಷ್ಟ ಸಂಪ್ರದಾಯದಂತೆ ದೇವರ ಚಂದ್ರಮಂಡಲ ಉತ್ಸವ ನಡೆಯಿತು. ಆ ಬಳಿಕ ದೇವರ ಪೇಟೆ ಸವಾರಿ ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೆಲ್, ಸಕ್ಕರೆ ಕಟ್ಟೆಗಳಲ್ಲಿ ನಡೆಯಿತು. ಇಲ್ಲಿನ ಕಟ್ಟೆಗಳಲ್ಲಿ ದೇವರು ಕಟ್ಟೆಪೂಜೆ ಸ್ವೀರಿಸಿದರು.
ಮಂಗಳವಾರ ಸಂಜೆ ಉತ್ಸವ, ಬನ್ನೂರು, ಅಶೋಕನಗರ, ರೈಲ್ವೆ ಮಾರ್ಗ ಸವಾರಿ ನಡೆಯಲಿದೆ.