ಕನ್ನಡಪ್ರಭ ವಾರ್ತೆ ಪುತ್ತೂರು
ಬಿಲ್ಲವ ಸಂಘದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಯುವವಾಹಿನಿ ಪುತ್ತೂರು ಘಟಕ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಸಹಯೋಗದಲ್ಲಿ ‘ಡೆನ್ನಾನ ಡೆನ್ನನ’ ಜಾನಪದ ಶೈಲಿಯ ಕಿರು ನಾಟಕ ಸ್ಪರ್ಧೆ ೨೫ರಂದು ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಬಿಲ್ಲವ ಸಂಘದ ಯುವವಾಹಿನಿಯ ಕಾರ್ಯಕ್ರಮ ಸಂಯೋಜಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಈ ಕುರಿತು ಮಾಹಿತಿ ನೀಡಿದರು.
ಗೆಜ್ಜೆಗಿರಿ ನಂದನ ಬಿತ್ತಿಲ್‌ನ ಯಜಮಾನ ಶ್ರೀಧರ ಪೂಜಾರಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಅಣ್ಣಿ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಶಾಸಕ ಅಶೋಕ್ ಕುಮಾರ್ ರೈ, ದ.ಕ ಜಿಲ್ಲಾ ವಾಲಿಬಾಲ್ ಎಸೋಸಿಯೇಶನ್ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್, ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಿಜಯ ಹಾರ್ವಿನ್, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಿಜಯ ಕುಮಾರ್ ಸೊರಕೆ, ಉದ್ಯಮಿ ಸತೀಶ್ ಬಿ., ನಿವೃತ್ತ ಎಎಸ್‌ಐ ಪುಷ್ಪಲತಾ, ಯುವವಾಹಿನಿ ಕೇಂದ್ರ ಸಮಿತಿ ಸಾಂಸ್ಕೃತಿಕ ನಿರ್ದೇಶಕ ಸುಶಾಂತ್ ಕರ್ಕೇರ, ಕಾರ್ಯಕ್ರಮ ಸಂಚಾಲಕ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಅಮೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಏಷ್ಯಾನೆಟ್ ಸುವರ್ಣನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್, ಮಂಗಳೂರಿನ ಉದ್ಯಮಿ ಅಭಿಷೇಕ್ ಸುವರ್ಣ ಅಜಿಲಮೊಗರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಕೈಪಂಗಳದೋಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಕೋಲಾಡಿ ಇದ್ದರು.