ಪುತ್ತೂರು: ಜಿ.ಎಲ್.ಆಚಾರ್ಯ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ

KannadaprabhaNewsNetwork |  
Published : Aug 08, 2025, 02:00 AM IST
ಫೋಟೋ: ೫ಪಿಟಿಆರ್- ಕವಿಗೋಷ್ಠಿಪುತ್ತೂರಿನಲ್ಲಿ ಜಿ.ಎಲ್.ಆಚಾರ್ಯ ಶತಮಾನೋತ್ಸವ ಆಚಾರ್ಯ ಕವಿಗೋಷ್ಠಿ ನಡೆಯಿತು. | Kannada Prabha

ಸಾರಾಂಶ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ, ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ ನೆರವೇರಿತು.

ಪುತ್ತೂರು: ವಿವಿಧ ಬಗೆಯ ಸಾಹಿತ್ಯ ಓದು ಕಡಿಮೆಯಾಗುತ್ತಿದೆ. ಶಿಕ್ಷಕರು ಸಾಹಿತ್ಯದ ಬಗೆಯ ಆಸಕ್ತಿ ಬೆಳೆಸಿಕೊಳ್ಳಬೇಕು. ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯ ಸೌಂದರ್ಯವನ್ನು ಉಳಿಸಿಕೊಳ್ಳಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಧ್ಯಾಪಕ ಪ್ರೊ.ವಿ.ಬಿ. ಅರ್ತಿಕಜೆ ಹೇಳಿದರು.ಅವರು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ, ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಕವಿಗೋಷ್ಠಿ ಉದ್ಘಾಟಿಸಿ, ಗೀತಾಚಾರ್ಯ ಶ್ರೀಕೃಷ್ಣ ಜಗದ್ಗುರು. ಶಿಕ್ಷಕರೆಲ್ಲಾ ಆಚಾರ್ಯರು. ಶಿಕ್ಷಕರ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಗೌರವವಿದೆ ಎಂದರು.ಇದೇ ಸಂದರ್ಭ ಸಾಹಿತಿ ಜಯಾನಂದ ಪೆರಾಜೆ ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಕವನಸಂಕಲನ ‘ಗೀತಾಫಲ’ ಕೃತಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ಪ್ರಾಂಶುಪಾಲ ಪ್ರೊ. ಸುಬ್ಬಪ್ಪ ಕೈಕಂಬ ಬಿಡುಗಡೆಗೊಳಿಸಿದರು.ಮುಖ್ಯ ಅತಿಥಿಯಾಗಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಡಾ. ಶಾಂತಾ ಪುತ್ತೂರು, ವಿ.ಬಿ.ಅರ್ತಿಕಜೆ ಅವರಿಗೆ ರಕ್ಷಾಬಂಧನ ಮಾಡಿದರು. ಕವಿಗಳಾದ ಗುಣಾಜೆ ರಾಮಚಂದ್ರ ಭಟ್, ಡಾ. ಸುರೇಶ ನೆಗಳಗುಳಿ, ಹಾ.ಮ. ಸತೀಶ ಬೆಂಗಳೂರು, ವಿಜಯ ಕುಮಾರ ಹೆಬ್ಬಾರಬೈಲು ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಣ ಸೌರಭ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಸ್ವಾಗತಿಸಿದರು. ಕಥಾಬಿಂದು ಪ್ರಕಾಶನ ಮಂಗಳೂರಿನ ಕಾದಂಬರಿಕಾರ ಪಿ.ವಿ.ಪ್ರದೀಪ್ ಕುಮರ್ ಶುಭಾಸಂಶನೆ ಮಾಡಿ ವಂದಿಸಿದರು.

ಡಾ. ವಾಣಿಶ್ರೀ ಕಾಸರಗೋಡು ತಂಡದಿಂದ ಸಾಹಿತ್ಯ ಗಾನ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ದೇವಕಿ ಜಯಾನಂದ ಉಪ್ಪಿನಂಗಡಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ