ಪುತ್ತೂರು: 6ರಂದ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣು ಮೇಳ

KannadaprabhaNewsNetwork |  
Published : Jun 05, 2025, 02:02 AM IST
ಫೋಟೋ: ೩ಪಿಟಿಆರ್-ಹಲಸುಸುದ್ಧಿಗೋಷ್ಠಿಯಲ್ಲಿ ಅನಂತಪ್ರಸಾದ್ ನೈತಡ್ಕ ಮಾತನಾಡಿದರು. | Kannada Prabha

ಸಾರಾಂಶ

ನವತೇಜ ಪುತ್ತೂರು ಆಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜೂ.೬ರಿಂದ ೮ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸು ಹಣ್ಣು ಮೇಳ’ ಹಮ್ಮಿಕೊಳ್ಳಲಾಗಿದೆ

ಹಲಸು ಹಣ್ಣು ಕವಿಗೋಷ್ಠಿ, ವಿಚಾರಗೋಷ್ಠಿ, ತಾಳಮದ್ದಳೆ, ಹಲಸು ಖಾದ್ಯಗಳ ವಿಶೇಷ ಭೋಜನ

ಕನ್ನಡಪ್ರಭ ವಾರ್ತೆ ಪುತ್ತೂರು

ಹಲಸಿನ ಮೌಲ್ಯ ಹೆಚ್ಚಿಸುವುದಕ್ಕಾಗಿ ಹಾಗೂ ಹಲಸು ಹಣ್ಣುಗಳ ಬಗ್ಗೆ ಹೊಸತನವನ್ನು ಮೂಡಿಸುವುದಕ್ಕಾಗಿ ನವತೇಜ ಪುತ್ತೂರು ಆಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜೂ.೬ರಿಂದ ೮ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸು ಹಣ್ಣು ಮೇಳ’ ಹಮ್ಮಿಕೊಳ್ಳಲಾಗಿದೆ ಎಂದು ನವತೇಜ ಪುತ್ತೂರು ಅಧ್ಯಕ್ಷ ಅನಂತಪ್ರಸಾದ್ ನೈತಡ್ಕ ಮತ್ತು ಕಾರ್ಯದರ್ಶಿ ಸುಹಾಸ್ ಮರಿಕೆ ತಿಳಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,೬ರಂದು ಮೇಳದ ಮಳಿಗೆಗಳನ್ನು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಮತ್ತು ಕೃಷಿಕ ಮಹದೇವ ಶಾಸ್ತ್ರಿ ಮಣಿಲ ಉಪಸ್ಥಿತರಿರುತ್ತಾರೆ ಎಂದರು.

ಅಪರಾಹ್ನ ನಡೆಯುವ ಸಭೆಯ ನೇತೃತ್ವವನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ವಹಿಸಲಿದ್ದಾರೆ. ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ ಶುಭಚಾಲನೆ ನೀಡಲಿದ್ದಾರೆ. ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ. ಶ್ಯಾಂ ಜ್ಯುವೆಲ್ಸ್ ಗ್ರೂಪ್‌ನ ಸಿ ಎಂ ಡಿ ಕೇಶವ ಪ್ರಸಾದ್ ಮುಳಿಯ, ನಗರಸಭೆಯ ಆಯುಕ್ತ ಮಧು ಎಸ್ ಮನೋಹರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಹಲಸು-ಹಣ್ಣುಗಳ ಕವಿಗೋಷ್ಠಿ ನಡೆಯಲಿದೆ. ಜೂ. ೭ರಂದು ಪೂರ್ವಾಹ್ನ ಗ್ರಾಮಜನ್ಯ ರೈತೋತ್ಪಾದಕ ಸಂಸ್ಥೆಯ ನಿರ್ದೇಶಕ ನಿರಂಜನ್ ಪೋಳ್ಯ ಅವರ ಅಧ್ಯಕ್ಷತೆಯಲ್ಲಿ ‘ಹಣ್ಣುಗಳೊಂದಿಗೆ’ ವಿಚಾರಗೋಷ್ಠಿ ನಡೆಯಲಿದ್ದು, ಹಾರ್ಧಿಕ್ ಹರ್ಬಲ್ಸ್‌ ಕಾರ್ಯನಿರ್ವಹಣಾಧಿಕಾರಿ ಮುರಳೀಧರ ಕೆ, ಶ್ರೀರಾಮ ಆಯಿಲ್ ಮಿಲ್‌ನ ಸಂತೋಷ್ ಬೋನಂತಾಯ, ಸೇಡಿಯಾಪು ವಿಶ್ವಾಸ್ ಹೋಂ ಪ್ರಾಡೆಕ್ಟ್ ನ ವಿನಯ ಸೇಡಿಯಾಪು, ಕೃಷಿಕ ಶಿವಪ್ರಸಾದ್ ಪಟ್ಟೆ, ಹಣ್ಣು ಕೃಷಿಕ ಚೇತನ್ ಶೆಟ್ಟಿ ವಿಷಯ ಮಂಡನೆ ಮಾಡಲಿದ್ದಾರೆ. ಸಂಜೆ ಪ್ರಸಿದ್ದ ಕಲಾವಿದರಿಂದ ‘ಪನಸೋಪಾಖ್ಯಾನ’ (ಹಲಸಿನ ಮೌಲ್ಯ ಹಾಗೂ ಅರಿವಿನ ಹರಿವಿನ ಕಾಲ್ಪನಿಕ ಕಥಾನಕ) ವಿನೂತನ ತಾಳಮದ್ದಳೆ ನಡೆಯಲಿದೆ. ವಿವೇಕಾನಂದ ಕಾಲೇಜ್‌ನ ವಿಶ್ರಾಂತ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್ ಪ್ರಸಂಗ ಬಿಡುಗಡೆಗೊಳಿಸಲಿದ್ದಾರೆ. ಯಕ್ಷರಂಗ ಪುತ್ತೂರು ಅಧ್ಯಕ್ಷ ಕಾಡೂರು ಸೀತಾರಾಮ ಶಾಸ್ತ್ರಿ ಉಪಸ್ಥಿತರಿರುತ್ತಾರೆ. ೮ರಂದು ಪೂರ್ವಾಹ್ನ ಸಮೃದ್ಧಿ ಗಿಡ ಗೆಳೆತನ ಸಂಘದ ಅಧ್ಯಕ್ಷ ಶಂಕರ ಸಾರಡ್ಕ ಅಧ್ಯಕ್ಷತೆಯಲ್ಲಿ ‘ಮೌಲ್ಯವರ್ಧನೆ’ ವಿಚಾರಗೋಷ್ಠಿ ನಡೆಯಲಿದ್ದು, ಬಾಯಾರು ಕುರುವೇರಿ ಕ್ಯಾಶ್ಯೂಸ್‌ನ ವಿಶ್ವಕೇಶವ ಮತ್ತು ನವ್ಯಶ್ರೀ ಕುರುವೇರಿ, ಅನುತ್ತಮ ಚಾಕೊಲೇಟ್‌ನ ಬಾಲಸುಬ್ರಹ್ಮಣ್ಯ ಪಿ.ಎಸ್, ಜೇನು ಕೃಷಿಕ ಶ್ಯಾಮ ಭಟ್ ವಾದ್ಯಕೋಡಿ, ಮುಜಂಟಿ ಜೇಜು ಕೃಷಿಕ ರಾಮಚಂದ್ರ ಪುದ್ಯೋಡು ವಿಚಾರ ಮಂಡನೆ ಮಾಡಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ನೇತೃತ್ವವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ವಹಿಸಲಿದ್ದಾರೆ. ಉಪ್ಪಿನಂಗಡಿ ಬಳ್ಳಿ ಆಯುರ್ ಗ್ರಾಮದ ಮುಖ್ಯ ವೈದ್ಯ ಡಾ. ಸುಪ್ರೀತ್ ಲೋಬೋ ಸಮಾಪನಾ ಮಾತುಗಳನ್ನಾಡಲಿದ್ದಾರೆ. ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ. ವಿಜಯ ಹಾರ್ವಿನ್, ರೋಟರಿ ಕ್ಲಬ್ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಜೆ ಕ್ಯಾಮ್ ಅಧ್ಯಕ್ಷ ದೀರಜ್ ಬಿ ಉದ್ಯಾವರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಧ್ವಾರಕಾ ಕಾರ್ಪೋರೇಶನ್ ವ್ಯವಸ್ಥಾಪನಾ ನಿರ್ದೇಶಕ ಗೋಪಾಲಕೃಷ್ಣ ಭಟ್ ಶುಭ ನುಡಿಗಳನ್ನಾಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಸುಮಾರು ೭೦ ಮಳಿಗೆಗಳಿಗೆ ಮೇಳದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ವಿಶೇಷವಾಗಿ ಕೊನೆಯ ದಿನದಂದು ಸುಮಾರು ೨೫ ಬಗೆಯ ಹಲಸಿನ ಹಣ್ಣು ಹಾಗೂ ಮಾವಿನ ಹಣ್ಣಿನ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದ್ದು, ೨೫೦ ಮಂದಿಗೆ ಸವಿಯುವ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ವೇಣುಗೋಪಾಲ್, ಕುಸುಮರಾಜ್ ಮತ್ತು ಪಶುಪತಿ ಶರ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿವೈಆರ್‌
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ.ನೂರಲ್ ಹುದಾ ಕರೆ