ಪುತ್ತೂರು: ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ

KannadaprabhaNewsNetwork |  
Published : Sep 02, 2024, 02:05 AM IST
ಫೋಟೋ: ೧ಪಿಟಿಆರ್-ಮೊಸರು ಕುಡಿಕೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ೧೪ನೇ ವರ್ಷದ ಮೊಸರು ಕುಡಿಕೆ ಉತ್ಸವ, ಭವ್ಯ ಶೋಭಾಯಾತ್ರೆ ಮತ್ತು ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಿತು. ಫೋಟೋ: ೧ಪಿಟಿಆರ್-ಅಟ್ಟಿ ಮಡಿಕೆಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ನಡೆದ ೧೪ನೇ ವರ್ಷದ ಮೊಸರು ಕುಡಿಕೆ ಉತ್ಸವದ ಹಿನ್ನಲೆಯಲ್ಲಿ ನಗರದಲ್ಲಿ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಿತು. | Kannada Prabha

ಸಾರಾಂಶ

ನಗರದ ೧೫ಕ್ಕೂ ಅಧಿಕ ಕಡೆಗಳಲ್ಲಿ ಅಟ್ಟಿ ಮಡಿಕೆ ಒಡೆಯುವ ಪ್ರದರ್ಶನ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿಪೂರ್ತಿ ಸಂಭ್ರಮದ ಸಲುವಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಸಹಯೋಗದಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ೧೪ನೇ ವರ್ಷದ ಮೊಸರು ಕುಡಿಕೆ ಉತ್ಸವ, ಭವ್ಯ ಶೋಭಾಯಾತ್ರೆ ಮತ್ತು ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ಶನಿವಾರ ಸಂಜೆ ನಡೆಯಿತು.ನಗರದಲ್ಲಿ ನಡೆದ ವೈಭವದ ಶೋಭಾಯಾತ್ರೆಗೆ ನಗರದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿಯಲ್ಲಿ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಪ್ರಚಾರ ಪ್ರಸಾರ ಪ್ರಮುಖ್ ಪ್ರದೀಪ್ ಸರಿಪಲ್ಲ, ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟಿಸಿದರು.

ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಿದರು.ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನಕ್ಕೆ ವಿಶ್ವಕಲಾ ನಿಕೇತನ ಆರ್ಟ್ಸ್ ಮತ್ತು ಕಲ್ಚರಲ್ ಅಕಾಡಮಿಯ ನೃತ್ಯ ನಿರ್ದೇಶಕಿ ವಿದುಷಿ ನಯನಾ ರೈ ಮತ್ತು ವಿದುಷಿ ಸ್ವಸ್ತಿಕಾ ಆರ್. ಶೆಟ್ಟಿ ಅವರ ಶಿಷ್ಯಂದಿರ ಭರತನಾಟ್ಯ ಪ್ರದರ್ಶನದ ಮೂಲಕ ನಗರದ ಬೊಳುವಾರಿನಲ್ಲಿ ಚಾಲನೆ ನೀಡಲಾಯಿತು. ನಗರದ ೧೫ಕ್ಕೂ ಅಧಿಕ ಕಡೆಗಳಲ್ಲಿ ಅಟ್ಟಿ ಮಡಿಕೆ ಒಡೆಯುವ ಪ್ರದರ್ಶನ ನಡೆಯಿತು.ವಿಹಿಂಪ ಪ್ರಾಂತ ಗೋ ರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ, ವಿಹಿಂಪ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಕಾರ್ಯದರ್ಶಿ ನವೀನ್ ನೆರಿಯ, ಬಜರಂಗದಳ ಸಂಯೋಜಕ ಭರತ್ ಕುಮ್ಡೇಲು, ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷೆ ಕೃಷ್ಣವೇಣಿ ಮುಳಿಯ, ಸಂಚಾಲಕ ಪುತ್ತೂರು ಉಮೇಶ್ ನಾಯಕ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!