ಪುತ್ತೂರು: ೨೮, ೨೯ರಂದು ದ್ವಿತೀಯ ವರ್ಷದ ‘ಶ್ರೀನಿವಾಸ ಕಲ್ಯಾಣೋತ್ಸವ’

KannadaprabhaNewsNetwork |  
Published : Dec 05, 2024, 12:33 AM IST
11 | Kannada Prabha

ಸಾರಾಂಶ

ಡಿ.೨೮ ಶನಿವಾರ ಸಂಜೆ ೪ ರಿಂದ ಬೊಳುವಾರಿನಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ವೈಭವದ ಶೋಭಾಯಾತ್ರೆ ನಡೆಯಲಿದೆ. ಸಂಜೆ ೫.೩೦ ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ‘ಈಶ ಮಂಟಪಕ್ಕೆ’ ಶ್ರದ್ಧಾಭಕ್ತಿ ಪೂರ್ವಕ ಸ್ವಾಗತ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಪುತ್ತೂರುಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಧರ್ಮ ಸಂಗಮ ಹಾಗೂ ಧಾರ್ಮಿಕ ಸಭೆ ಡಿ.೨೮ ಹಾಗೂ ೨೯ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.

ಅವರು ಬುಧವಾರ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಗಳನ್ನು ನೀಡಿದರು. ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಡಿ.೨೭ರಂದು ಸಂಜೆ ೪ ಗಂಟೆಗೆ ಪುತ್ತೂರು ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆ ತನಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಡಿ.೨೮ ಶನಿವಾರ ಸಂಜೆ ೪ ರಿಂದ ಬೊಳುವಾರಿನಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ವೈಭವದ ಶೋಭಾಯಾತ್ರೆ ನಡೆಯಲಿದೆ. ಸಂಜೆ ೫.೩೦ ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ‘ಈಶ ಮಂಟಪಕ್ಕೆ’ ಶ್ರದ್ಧಾಭಕ್ತಿ ಪೂರ್ವಕ ಸ್ವಾಗತ ನೀಡಲಾಗುವುದು.ಧರ್ಮಸಂಗಮ ಧಾರ್ಮಿಕ ಸಭೆ: ಸಂಜೆ ೬ ರಿಂದ ನಡೆಯುವ ಧರ್ಮ ಸಂಗಮ ಧಾರ್ಮಿಕ ಸಭೆಯಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು, ಅರಕಲಗೂಡು ವಿಶ್ವಬ್ರಾಹ್ಮಣ ಮಹಾ ಸಂಸ್ಥಾನದ ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಮಹಾಬಲ ಸ್ವಾಮೀಜಿ, ಶ್ರೀ ಕ್ಷೇತ್ರ ಕೇಮಾರಿನ ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಿಟ್ಲ ಯೋಗೀಶ್ವರ ಮಠದ ಶ್ರೀ ಯೋಗೇ ಶ್ರದ್ಧಾನಂದ ಜೀ, ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಶ್ರೀ ಕೃಷ್ಣ ಗುರೂಜಿ, ಬೆಳಾಲು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಶ್ರೀ ಹರೀಶ್ ಅರಿಕೋಡಿ ಉಪಸ್ಥಿತರಿದ್ದು ಆಶೀರ್ವಚನ ನೀಡಲಿದ್ದಾರೆ. ರಾತ್ರಿ 8ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಡಿ.೨೯ರಂದು ಸಂಜೆ ೬ ರಿಂದ ಸಮಸ್ತ ಹಿಂದೂ ಬಂಧುಗಳ ಸಮ್ಮುಖದಲ್ಲಿ ''''ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಅನ್ನಸಂತರ್ಪಣೆ ಜರಗಲಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಶಶಾಂಕ ಕೊಟೇಚಾ, ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ, ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?