ಡಾ. ಶಿವರಾಮ ಕಾರಂತರ ಜನ್ಮ ದಿನಾಚರಣೆ ಪೂರ್ವಭಾವಿ ಸಭೆ
ಸಮಿತಿ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಕಾರ್ಯದರ್ಶಿಯಾಗಿ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಸಮಿತಿ ಸದಸ್ಯರಾಗಿ ಸಾಹಿತಿ ಝೇವಿಯರ್ ಡಿಸೋಜ, ತಾಳ್ತಜೆ ವಸಂತಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಅವರನ್ನು ನೇಮಕ ಮಾಡಲಾಯಿತು. ೨೦೨೪ರ ಸಾಲಿನಲ್ಲಿ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಇದ್ದ ಕಾರಣ ಡಾ. ಕಾರಂತ ಬಾಲವನ ಪ್ರಶಸ್ತಿ ಪ್ರದಾನ ಕಾರ್ಯ ನಡೆದಿರಲಿಲ್ಲ. ಆದ್ದರಿಂದ ಈ ಬಾರಿ ೨೦೨೪ ಮತ್ತು ೨೦೨೫ನೇ ಸಾಲಿಗೆ ಪ್ರಶಸ್ತಿಗೆ ಎರಡು ಪ್ರತ್ಯೇಕ ಕ್ಷೇತ್ರಗಳ ಇಬ್ಬರು ಸಾಧಕರನ್ನು ಮುಂದಿನ ಒಂದು ವಾರದ ಒಳಗಾಗಿ ಆಯ್ಕೆ ಮಾಡಲು ತೀರ್ಮಾನಿಸಲಾಯಿತು.
ಡಾ.ಕಾರಂತ ಬಾಲವನದ ಮೂಲ ವ್ಯವಸ್ಥೆಗೆ ಧಕ್ಕೆಯಾಗದಂತೆ ಇಲ್ಲಿ ಅಭಿವೃದ್ಧಿ ಕಾರ್ಯ ನಡೆಯಬೇಕಾಗಿದೆ. ಪ್ರಕೃತಿ ದತ್ತವಾಗಿರುವ ಬಾಲವನದಲ್ಲಿ ದೇಶದ ಸಾಹಿತಿಗಳು, ಕಾದಂಬರಿಕಾರರು ಹಾಗೂ ಕಥೆಗಾರರು ಇಲ್ಲಿ ಬಂದು ತಮ್ಮ ಕೃತಿಗಳನ್ನು ರಚಿಸುವ ಹಾಗೇ ಬರಹಗಾರರ ತಾಣವನ್ನಾಗಿ ರೂಪಿಸಲು ಚಿಂತನೆ ಮಾಡಲಾಗಿದೆ. ಇದು ದೇಶದ ಸಾಹಿತ್ಯ ಮನಸ್ಸುಗಳಿಗೆ ಪ್ರೇರಣೆ ನೀಡುವ ಪೂರಕ ವಾತಾವರಣದ ಸ್ಥಳವಾಗುವಂತೆ ಅಭಿವೃದ್ಧಿ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಡಿವೈಎಸ್ಪಿ ಅರುಣ್ ನಾಗೇಗೌಡ, ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜ, ವಿವಿಧ ಕ್ಷೇತ್ರದ ಪ್ರಮುಖರಾದ ಬಿ.ಪುರಂದರ ಭಟ್, ಐ.ಕೆ. ಬೊಳುವಾರು, ಡಾ. ಶ್ರೀಧರ್ ಎಚ್. ಜಿ., ರಾಘವೇಂದ್ರ ಹಾಲ್ಕೆರೆ, ನಯನ ರೈ, ಭಾಸ್ಕರ ಬಾರ್ಯ, ಡಾ. ಎಚ್. ಮಾಧವ ಭಟ್, ಚಂದ್ರಶೇಖರ ಆಳ್ವ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್, ಲೋಕೋಪಯೋಗಿ ಇಲಾಖಾಧಿಕಾರಿ ರಾಜೇಶ್ ರೈ, ಇಂಜಿನಿಯರ್ ಪ್ರಮೋದ್‌ಕುಮಾರ್, ಮೆಸ್ಕಾಂ ಇಲಾಖೆಯ ರಾಮಚಂದ್ರ, ಕನ್ನಡ ಮತ್ತು ಸಂಸ್ತಿಕೃ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ನಗರಸಭಾ ಸದಸ್ಯೆ ವಿದ್ಯಾ ಗೌರಿ, ತಾಪಂ ಮೆನೇಜರ್ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.