ಪುತ್ತೂರು: 29.30ರಂದು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ

KannadaprabhaNewsNetwork |  
Published : Nov 26, 2025, 03:00 AM IST
ಫೋಟೋ: ೨೪ಪಿಟಿಆರ್-ಅರುಣ್ ಸುದ್ಧಿಗೋಷ್ಟಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು. | Kannada Prabha

ಸಾರಾಂಶ

ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿರುವ ದೇವರಮಾರು ಗದ್ದೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವ ನಡೆಯಲಿದೆ. ಲಕ್ಷಾಂತರ ಮಂದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ವತಿಯಿಂದ ೨೯ ಮತ್ತು ೩೦ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿರುವ ದೇವರಮಾರು ಗದ್ದೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವ ನಡೆಯಲಿದೆ. ಲಕ್ಷಾಂತರ ಮಂದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಿಂದು ಸಮಾಜಕ್ಕೆ ಶಕ್ತಿ ಕೊಡಬೇಕು ಮತ್ತು ಸನಾತನ ಹಿಂದು ಧರ್ಮ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಮಾಜದ ಮುಂದಿರುವ ನೂರಾರು ಸವಾಲುಗಳಿಗೆ ಒಂದಾಗಿ ಒಟ್ಟಾಗಿ ಸಂದೇಶ ಕೊಡುವ ಕಾರ್ಯಕ್ರಮ ಇದಾಗಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜನ್ಮಶತಾಬ್ದಿ ಶಾಶ್ವತವಾಗಿ ಸ್ಮರಣೆಯಲ್ಲಿಟ್ಟುಕೊಳ್ಳುವ ಮತ್ತು ಹಿಂದು ಸಮಾಜದಲ್ಲಿ ಸರಳ, ಸಾಮೂಹಿಕ ವಿವಾಹಕ್ಕೆ ಒತ್ತು ನೀಡುವ ನಿಟ್ಟಿನಲ್ಲಿಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿದ ಆರಂಭದಲ್ಲಿ ೧೪೩ ಜೋಡಿಗಳು ನೋಂದಾಯಿಸಿಕೊಂಡಿದ್ದರು. ಆದರೆ ವಿವಿಧ ಕಾರಣಗಳಿಂದಾಗಿ ಪರಿಶೀಲನೆ ಸಂದರ್ಭದಲ್ಲಿ ಹಲವು ಕೈ ಬಿಡಬೇಕಾಗಿ ಬಂತು. ಇದೀಗ ೧೬ ಜೋಡಿಗಳ ನೋಂದಣಿ ಪೂರ್ಣಗೊಂಡಿದ್ದು, ಅವರಿಗೆ ಸಾಹಿತ್ಯ ವಿತರಿಸಲಾಗಿದೆ. ಪ್ರತಿ ಜೋಡಿಗೆ ಸುಮಾರು ರೂ.೭೫ ಸಾವಿರ ವೆಚ್ಚದಲ್ಲಿ ಚಿನ್ನದ ತಾಳಿ, ಕರಿಮಣಿ ವಸ್ತ್ರಗಳ ಸಹಿತ ಈ ಖರ್ಚು ಭರಿಸಲಾಗುವುದು ಎಂದರು.

ಶಾಸ್ತ್ರಬದ್ಧವಾಗಿ ವಿವಾಹದ ಕ್ರಮಗಳು ನಡೆಯಲಿವೆ. ಸಾಮೂಹಿಕ ವಿವಾಹ ನಡೆಯುವ ನ.೩೦ ರಂದು ದಿಬ್ಬಣವು ಬೆಳಗ್ಗೆ ಗಂಟೆ ೮.೩೦ಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಬಳಿಯಿಂದ ಹೊರಡಲಿದೆ. ವೇದಿಕೆಯಲ್ಲೂ ಜೋಡಿಗಳ ಕುಟುಂಬಗಳು ಜೊತೆಯಲ್ಲಿ ಇರುತ್ತಾರೆ. ಪ್ರತಿ ಜೋಡಿಗೂ ಶೃಂಗಾರ ಮಂಟಪದ ವ್ಯವಸ್ಥೆ ಮಾಡಲಾಗಿದೆ. ವಿವಾಹ ಕಾರ್ಯಕ್ರಮದಲ್ಲೂ ಪ್ರತಿ ಜೋಡಿಗೆ ಒಬ್ಬೊಬ್ಬ ವೈದಿಕರಿರುತ್ತಾರೆ. ಪ್ರಧಾನ ವೈದಿಕರ ಮಾರ್ಗದರ್ಶನದಂತೆ ಆಯಾಯ ವೈದಿಕರು ವಿವಾಹ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಹೇಳಿದರು.ನ.೨೮ಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಹೊರೆಕಾಣಿಕೆ ಮೆರವಣಿಗೆ ದರ್ಬೆಯಿಂದ ಸಂಜೆ ಗಂಟೆ ೪ಕ್ಕೆ ಹೊರಡಲಿದೆ. ಪ್ರತಿ ಗ್ರಾಮದಿಂದಲೂ ಬಂದ ಹಸಿರುಹೊರಕಾಣಿಕೆ ದರ್ಬೆಯಿಂದ ಮೆರವಣಿಗೆ ಮೂಲಕ ದೇವಸ್ಥಾನ ಸಭಾಭವನದಲ್ಲಿರುವ ಉಗ್ರಾಣದಲ್ಲಿ ಜೋಡಿಸಲಾಗುವುದು. ನ.೨೯ಕ್ಕೆ ಬೆಳಗ್ಗೆ ಗಣಪತಿ ಹೋಮದಿಂದ ಆರಂಭಗೊಂಡು ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ ೪ ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ವೈಭವದ ಶೋಭಯಾತ್ರ ಬೊಳುವಾರಿನಿಂದ ಆರಂಭಗೊಳ್ಳಲಿದೆ. ಸಂಜೆ ೭.೩೦ರಿಂದ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮ್ರಾಜ್ಯೋತ್ಸವ ನಡೆಯಲಿದೆ ಎಂದರು.ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಚಿತ್ರಾಪುರ ಮಠದ ವಿದ್ಯೆಂದ್ರ ತೀರ್ಥ ಶ್ರೀಪಾದರು, ಅರಮಾದೆನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಗುರುಪುರ ಶ್ರೀ ಕ್ಷೇತ್ರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಗುರುದೇವದತ್ತ ಸಂಸ್ಥಾನಂನ ಗುರುದೇವಾನಂದ ಸ್ವಾಮೀಜಿ, ಶ್ರೀಕ್ಷೇತ್ರ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ, ಕನ್ಯಾನ ಶ್ರೀ ಕ್ಷೇತ್ರ ಕಣಿಯೂರು ಮಠದ ಶ್ರೀ ಮಹಾಬಲ ಸ್ವಾಮೀಜಿ, ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ರಾತ್ರಿ ಮಂಗಳರಾತಿ ಅನ್ನಸಂತರ್ಪಣೆ, ಬಳಿಕ ಸಾಂಸ್ಕೃತಿಕ ಕಲಾವೈಭವ ಪ್ರದರ್ಶನಗೊಳ್ಳಲಿದೆ ಎಂದರು.

ನ.೩೦ ರಂದು ಬೆಳಿಗ್ಗೆ ಗಂಟೆ ೫.೩೦ ರಿಂದ ಸುಪ್ರಭಾತ ಪೂಜಾ ಸೇವೆ, ೧೦.೩೦ರ ಮಕರ ಲಗ್ನದಲ್ಲಿ ಸಾಮೂಹಿಕ ವಿವಾಹ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭ ಭಜನೋತ್ಸವ ನಡೆಯಲಿದೆ. ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಆಕರ್ಷಕ ಸಿಡಿಮದ್ದು ಪ್ರದರ್ಶನ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಪುತ್ತಿಲ ಹೇಳಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನರಸಿಂಹಪ್ರಸಾದ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರೇಮ್‌ರಾಜ್ ಉಪಸ್ಥಿತರಿದ್ದರು. ಸಹ ಸಂಚಾಲಕರಾದ ಉಮೇಶ್ ಕೋಡಿಬೈಲ್ ಮತ್ತು ರವಿ ಕುಮಾರ್ ರೈ ಕೆದಂಬಾಡಿಮಠ ಸಹಕರಿಸಿದರು.

PREV

Recommended Stories

ವಾಟರ್‌ ಬಾಟಲ್‌ ತಯಾರಿಸಲು ಬೆಂಗಳೂರು ಜಲಮಂಡಳಿ ಸಿದ್ಧತೆ: ಶೀಘ್ರ ಮಾರುಕಟ್ಟೆಗೆ ಲಭ್ಯ
ತಾಯಿಯಿಂದಲೇ 3 ದಿನದ ಶಿಶು ಉಸಿರುಗಟ್ಟಿಸಿ ಕೊಲೆ